ಗಂಗಾವತಿ : ಇದೇ ತಿಂಗಳು 24ರಂದು ಹನುಮ ಜಯಂತಿ ಅಂಗವಾಗಿ ಮಾಲೆ ಧರಿಸಿಕೊಂಡು ಸಾವಿರಾರು ಭಕ್ತರು ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದು, ಮಾಲೆ ವಿರಮಣಕ್ಕೆ ಜಿಲ್ಲಾಡಳಿತ ಸೂಕ್ತ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕ ಜಿ. ಜನಾರ್ದನರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗತ್ತಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಎರಡನೇ ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿದ್ದ ಶಾಸಕ, ಹನುಮ ಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯಕ್ರಮ ಯಶಸ್ವಿಯಾಗಲು ಕುಡಿಯುವ ನೀರು, ಸ್ನಾನ, ತುತರ್ು ಆರೋಗ್ಯ ಪರೀಕ್ಷೆಯಂತ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು.
ಅಲ್ಲದೇ ಮುನ್ನೆಚ್ಚರಿಕೆಯಾಗಿ ಸೂಕ್ತ ಪೊಲೀಸ್ ಬಂದೋಬಸ್ತ್, ವಾಹನಗಳ ನಿಲುಗಡೆಗೆ ಸೂಕ್ತ ಪಾಕರ್ಿಂಗ್ ವ್ಯವಸ್ಥೆ, ಭಕ್ತರಿಗೆ ಬೆಟ್ಟದಲ್ಲಿ ಉಪಹಾರ, ಊಟ ಸೇರಿದಂತೆ ಇನ್ನಿತರ ಸೂಕ್ತ ಸೌಲಭ್ಯ ಕಲ್ಪಿಸಲು ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಹಿಂದುಗಳ ಪವಿತ್ರ ಕ್ಷೇತ್ರವಾದ ಅಂಜನಾದ್ರಿ ಬೆಟ್ಟಕ್ಕೆ ನಾಡಿನ ವಿವಿಧ ಜಿಲ್ಲೆಗಳಿಂದ ಮಾಲಾ ವಿಸರ್ಜನೆಗಾಗಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ ಊಟ, ಉಪಹಾರ ಸೇರಿದಂತೆ ಸಂಚಾರದಟ್ಟಣೆ, ಜನದಟ್ಟಣೆ ನಿಯಂತ್ರಿಸಲು ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು.
ರಾತ್ರಿ ಬರಲಿರುವ ಭಕ್ತರಿಗೆ ತಂಗಲು ಸೂಕ್ತ ವ್ಯವಸ್ಥೆ, ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ ಸೇರಿದಂತೆ, ಸ್ನಾನ ಘಟ್ಟಗಳನ್ನು ನಿಮರ್ಿಸಬೇಕು ಹಾಗೂ ಅನ್ನಪ್ರಸಾದಕ್ಕಾಗಿ ಬೆಟ್ಟದ ಎಡ ಭಾಗದಲ್ಲಿ ಸಂಸ್ಕೃತ ಪಾಠಶಾಲೆ ಆವರಣದಲ್ಲಿ ವ್ಯವಸ್ಥೆ ಮಾಡವಂತೆ ಶಾಸಕ ಸೂಚಿಸಿದರು.
ಗಂಗಾವತಿ ತಹಸೀಲ್ದಾರ್ ವಿಶ್ವನಾಥ ಮುರಡಿ, ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಎಂಜಿನೀಯರ್ ವಿಜಯಕುಮಾರ, ಆನೆಗೊಂದಿ, ಸಣಾಪುರ ಗ್ರಾಮ ಪಂಚಾಯಿತಿ ಪಿಡಿಒ, ಅಂಜನಾದ್ರಿ ದೇಗುಲದ ಆಡಳಿತ ಮಂಡಳಿಯ ವ್ಯವಸ್ಥಾಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಳಿದ್ದರು


