Saturday, November 23, 2024
Flats for sale
Homeರಾಜ್ಯಗದಗ : ಮಲಗಿದಲ್ಲೇ ಒಂದೇ ಕುಟುಂಬದ ನಾಲ್ಕು ಮಂದಿಯ ಭೀಕರ ಹತ್ಯೆ.

ಗದಗ : ಮಲಗಿದಲ್ಲೇ ಒಂದೇ ಕುಟುಂಬದ ನಾಲ್ಕು ಮಂದಿಯ ಭೀಕರ ಹತ್ಯೆ.

ಗದಗ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕಳೆದ 15 ದಿನಗಳಲ್ಲಿ ಹಲವು ಮಂದಿ ಹತ್ಯೆಯಾದ ಘಟನೆ ವರದಿಯಾಗಿದೆ. ಮಲಗಿದ್ದಲ್ಲೇ ನಾಲ್ವರ ಭೀಕರ ಹತ್ಯೆಗೈದ ಪ್ರಕರಣ ಗದಗ ನಗರದ ದಾಸರ ಓಣಿಯಲ್ಲಿ ಬೆಳಕಿಗೆ ಬಂದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಕೊಲೆ ಮಾಡಲಾಗಿದೆ. ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ 27, ಪರಶುರಾಮ 55, ಪತ್ನಿ ಲಕ್ಷ್ಮೀ 45, ಪುತ್ರಿ ಆಕಾಂಕ್ಷ 16 ಕೊಲೆಯಾದವರು.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಹತ್ಯೆಯಾದವರಲ್ಲಿ ಮೂವರು ಮೂಲತಃ ಕೊಪ್ಪಳದ ಭಾಗ್ಯನರದ ನಿವಾಸಿಗಳು. ಪರಶುರಾಮ, ಲಕ್ಷ್ಮೀ, ಆಕಾಂಕ್ಷ ಕೊಪ್ಪಳದ ಭಾಗ್ಯನಗರದ ನಿವಾಸಿಗಳು. ಹತ್ಯೆಯಾದ ಪರಶುರಾಮ ಬಿಜೆಪಿಯ ಕಾರ್ಯಕರ್ತ. ಕಳೆದ ಸ್ಥಳೀಯ ಚುನಾವಣೆಯಲ್ಲಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯತ್ವ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಪಟ್ಟಣ ಪಂಚಾಯತಿಯ 13ನೇ ವಾರ್ಡ್​ನಿಂದ ಸ್ಪರ್ಧಿಸಿ ಸೋತಿದ್ದರು.

ನಂತರ ಹೋಟೆಲ್ ಬ್ಯುಸಿನೆಸ್​ನಲ್ಲಿ ಪರುಶುರಾಮ ತೊಡಗಿಸಿಕೊಂಡಿದ್ದರು. ಹತ್ಯೆಯಾದ ಮೂವರು ಕೊಪ್ಪಳದ ಭಾಗ್ಯನಗರದಲ್ಲಿ ವಾಸವಾಗಿದ್ದರು. ಉಳಿದ ಪರಶುರಾಮ ಸಂಬಂಧಿಕರೆಲ್ಲ ಕುಷ್ಟಗಿ ತಾಲೂಕಿನ ಹನುಮಸಾಗರದ ಗಡಿಭಾಗದಲ್ಲಿ ವಾಸವಾಗಿದ್ದರು. ಹತ್ಯೆಯಾದ ಪುತ್ರಿ ಆಕಾಂಕ್ಷಳನ್ನು ಪರಶುರಾಮ-ಲಕ್ಷ್ಮಿ ದಂಪತಿ ದತ್ತು ಪಡೆದುಕೊಂಡಿದ್ದರು. ಮಕ್ಕಳಾಗದ ಹಿನ್ನೆಲೆಯಲ್ಲಿ ಲಕ್ಷ್ಮೀ ಸಂಬಂಧಿಕರಿಂದ ಆಕಾಂಕ್ಷಳನ್ನು ದತ್ತು ಪಡೆದುಕೊಂಡಿದ್ದರು.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular