Thursday, July 23, 2026
Homeರಾಜ್ಯಗದಗ : ಸಾಲ ಬಾಧೆ,ಕೌಟುಂಬಿಕ ಕಲಹದಿಂದ ಬೇಸತ್ತುಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಗದಗ : ಸಾಲ ಬಾಧೆ,ಕೌಟುಂಬಿಕ ಕಲಹದಿಂದ ಬೇಸತ್ತುಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು.

ಗದಗ : ಸಾಲಬಾಧೆಯಿಂದ ಬೇಸತ್ತ ಹಾಗೂ ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ ತೇಲಿ (26) ಸಾವಕ್ಕ ತೇಲಿ (40) ರೇಣವ್ವ (39) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ.

ಸಾಲದ ವಿಷಯಕ್ಕೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದ್ದು.ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಗಲಾಟೆ ಮಾಡಿಕೊಂಡಿದ್ದ ಮಂಜುನಾಥ ಆತ್ಮಹತ್ಯೆಗೆ ಮುಂದಾಗಿದ್ದ ಈ ವೇಳೆ ರಕ್ಷಣೆ ಮಾಡಲು ಹೋಗಿ ತಾಯಿ ಕೂಡ ಹಳಿ ಮೇಲೆ ಬಿದ್ದು ಬಲಿಯಾಗಿದ್ದಾರೆ. ಇನ್ನು ಮತ್ತೊಂದೆಡೆ ಮಗ ಮಂಜುನಾಥ ತೇಲಿ ಹಾಗೂ ತಾಯಿ ರೇಣವ್ವ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಸಾವಕ್ಕ ಎಂಬುವವರು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾವಕ್ಕ, ರೇಣುಕಾ ಮಧ್ಯೆ ಟ್ರ್ಯಾಕ್ಟರ್ ಸಾಲ ಕಟ್ಟುವ ವಿಷಯವಾಗಿ ಜಗಳವಾಡಿಕೊಂಡಿದ್ದರು. ಬ್ಯಾಂಕ್‌ನಿಂದ 4 ಲಕ್ಷ ರೂ. ಸಾಲ ಪಡೆದು ಟ್ರ್ಯಾಕ್ಟರ್ ಖರೀದಿ ಮಾಡಿದ್ದರು. ಟ್ರ್ಯಾಕ್ಟರ್ ಕಂತು ವಿಚಾರವು ಕೂಡು ಕುಟುಂಬದಲ್ಲಿ ಗಲಾಟೆಗೆ ಕಾರಣವಾಗಿತ್ತು ಎನ್ನಲಾಗಿದೆ. ಇದೀಗ ಒಂದೇ ಕುಟುಂಬದ ಮೂವರನ್ನು ಕಳೆದುಕೊಂಡು ಕುಟುಂಬಸ್ಥರು ಕಂಗಲಾಗಿದ್ದಾರೆ.

ಸ್ಥಳಕ್ಕಾಗಮಿಸಿದ ನಗರ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಆಗಮಿಸಿ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular