Saturday, March 14, 2026
Flats for sale
Homeರಾಜ್ಯಚಿಕ್ಕಬಳ್ಳಾಪುರ : ಕಾರು ಪಲ್ಟಿಯಾಗಿ ಕೆರೆಗೆ ಬಿದ್ದು ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವು.

ಚಿಕ್ಕಬಳ್ಳಾಪುರ : ಕಾರು ಪಲ್ಟಿಯಾಗಿ ಕೆರೆಗೆ ಬಿದ್ದು ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವು.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಹೊರವಲಯದ ಹೆದ್ದಾರಿ ಕೆಳಸೇತುವೆ ಬಳಿ ಕಾರು ಪಲ್ಟಿಯಾಗಿ ಕಂದಕಕ್ಕೆ ಬಿದ್ದು ನಾಲ್ವರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ವಿದ್ಯಾರ್ಥಿನಿಯರು ಇಬ್ಬರನ್ನು ಬಿಡಲು ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಪೊಲೀಸರ ಪ್ರಕಾರ ವಿದ್ಯಾರ್ಥಿಯೊಬ್ಬ ಕಾರು ಚಲಾಯಿಸುತ್ತಿದ್ದ. ಅತಿವೇಗದಿಂದ ಬಂದ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ನಾಲೆಗೆ ಉರುಳಿ ಈ ದುರ್ಘಟನೆ ಸಂಭವಿಸಿದೆ.

ಈ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular