ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಹೆಬ್ಬರಿ ಗ್ರಾಮದ ಬಳಿಯ ಫಾರ್ಮ್ ನಲ್ಲಿ ಆಫ್ರಿಕನ್ ಹಂದಿ ಜ್ವರ ಸೋಂಕು ಪತ್ತೆಯಾಗಿದೆ. ಹಂದಿ ಜ್ವರದಿಂದ ನೂರಕ್ಕೂ ಹೆಚ್ಚು ಹಂದಿಗಳು ಸಾವನ್ನಪ್ಪಿದು ಜಿಲ್ಲಾಡಳಿತ ಕಟ್ಟೇಚ್ಚೆರ ವಹಿಸಿದೆ.
ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದು ಆಫ್ರಿಕನ್ ಹಂದಿ ಜ್ವರದಿಂದ ಮನುಷ್ಯರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.
ಸೋಂಕು ನಿಯಂತ್ರಿಸಲು ಫಾರ್ಮ್ ನಲ್ಲಿರುವ 57 ಹಂದಿಗಳನ್ನು ಕೊಲ್ಲಲು ನಿರ್ಧಾರಿಸಿದ್ದು ಇಂದು ಮದ್ಯಾಹ್ನ ಸಮಯದಲ್ಲಿ ಹಂದಿಗಳನ್ನು ಸಾಮೂಹಿಕವಾಗಿ ಗುಂಡಿಗೆ ಹಾಕಿ ಮುಚ್ಚಲು ತಯಾರಿ ನಡೆಸುತ್ತಿದ್ದಾರೆ.ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿ ಸೋಂಕು ಪತ್ತೆಯಾಗಿದೆ.