Thursday, November 21, 2024
Flats for sale
Homeರಾಜ್ಯಚಿಕ್ಕಬಳ್ಳಾಪುರ : “ಭಾರತರತ್ನ” ಸರ್‌ ಎಂ.ವಿಶ್ವೇಶ್ವರಯ್ಯ ವ್ಯಾಸಂಗ ಮಾಡಿದ್ದ ಸರ್ಕಾರಿ ಶಾಲೆಯೂ ವಕ್ಫ್‌ ಹೆಸರಿಗೆ..!

ಚಿಕ್ಕಬಳ್ಳಾಪುರ : “ಭಾರತರತ್ನ” ಸರ್‌ ಎಂ.ವಿಶ್ವೇಶ್ವರಯ್ಯ ವ್ಯಾಸಂಗ ಮಾಡಿದ್ದ ಸರ್ಕಾರಿ ಶಾಲೆಯೂ ವಕ್ಫ್‌ ಹೆಸರಿಗೆ..!

ಚಿಕ್ಕಬಳ್ಳಾಪುರ : ಅವ್ದು ಇದು ಒಂದು ಸುದ್ದಿನೇ ಭಾರತರತ್ನ ಸರ್‌ ಎಂ.ವಿಶ್ವೇಶ್ವರಯ್ಯ ವ್ಯಾಸಂಗ ಮಾಡಿದ್ದ ಸರ್ಕಾರಿ ಶಾಲೆಯನ್ನೇ ವಕ್ಫ್‌ ನುಂಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕಂದವಾರ ಸರ್ಕಾರಿ ಮಾದರಿ‌ ಹಿರಿಯ ಪ್ರಾಥಮಿಕ ಶಾಲೆಯ ಹೆಸರಿನಲ್ಲಿದ್ದ 19 ಗುಂಟೆ ಜಾಗ ದಾವೂದ್ ಷಾ ವಾಲೀ ದರ್ಗಾ ಸುನ್ನಿ ವಕ್ಫ್‌ ಸ್ವತ್ತು ಎಂದು ಬದಲಾವಣೆ ಮಾಡಲಾಗಿದೆ. ಸರ್ಕಾರಿ ಶಾಲೆಯನ್ನೂ ವಕ್ಫ್‌ ಹೆಸರಿಗೆ ಪರಭಾರೆ ಮಾಡಿರುವ ಪ್ರಸಂಗ ಇದೀಗ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಹಿರಿಯ ಚೇತನ ಸರ್.ಎಂ. ವಿಶ್ವೇಶ್ವರಯ್ಯ 1861 ಸೆಪ್ಟೆಂಬರ್ 15 ರಂದು ಕೋಲಾರ ಜಿಲ್ಲೆ ಚಿಕ್ಕಬಳ್ಳಾಪುರ ತಾಲ್ಲೋಕಿನ ಮುದ್ದೇನಹಳ್ಳಿಯ ಸುಸಂಸ್ಕøತ ಮನೆತನವಾದ ಮಲಕನಾಡು ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ತಂದೆ ಶ್ರೀನಿವಾಸಶಾಸ್ತ್ರಿ, ತಾಯಿ ವೆಂಕಾಜಮ್ಮ. ಪ್ರಾರಂಭದ ವಿದ್ಯಾಭ್ಯಾಸ ಚಿಕ್ಕಬಳ್ಳಾಪುರದಲ್ಲೇ ನಡೆಯಿತು. ಹೈಯರ್ ಸೆಕೆಂಡರಿ ಮುಗಿಸಿದ ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಮೈಸೂರು ರಾಜ್ಯದಲ್ಲಿ ಅತಿ ಹೆಚ್ಚು ಅಂಕ ಪಡೆದರು, ಮುಂದೆ ಮದರಾಸು ವಿಶ್ವವಿದ್ಯಾಲಯದ ಬಿ.ಎ., ಪರೀಕ್ಷೆಯಲ್ಲಿ ಪ್ರಥಮ ದರ್ಜೆ ತೇರ್ಗತೆ ಹೊಂದಿ, ಪುಣೆ ವಿಜ್ಞಾನ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಪೂರೈಸಿ, ಮುಂಬೈನಲ್ಲಿ ಐ.ಅ.ಇ. ಮತ್ತು ಇ.ಅ.ಇ.ಐ.ನಲ್ಲಿ ಮುಂಬೈ ಪ್ರಾಂತ್ಯಕ್ಕೆ ಪ್ರಥಮ ಸ್ಥಾನ ಪಡೆದರು.ಆದರೆ ಅವರು ಕಲಿತಂತಹ ಶಾಲೆಯನ್ನೇ ವಕ್ಫ್‌ ನುಂಗಿದೆ ಅಂದರೆ ಈ ರಾಜ್ಯದಲ್ಲಿ ಇದಕ್ಕಿಂತ ದೊಡ್ಡ ಅನಾಹುತ ಮತ್ತೊಂದಿಲ್ಲವೆಂದು ಶಾಲೆಯಾ ಹಳೆ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಕೆಲ ವರ್ಷಗಳ ಹಿಂದೆ ಶಾಲಾ ಆವರಣದಲ್ಲಿ ದರ್ಗಾ ತಲೆ ಎತ್ತಿದೆ. ಗ್ರಾಮಸ್ಥರು ಸರ್ಕಾರಿ ಶಾಲೆ ಉಳಿವಿಗಾಗಿ ಕಾನೂನು ಮೊರೆ ಹೋಗಿದ್ದಾರೆ. 2015-16 ರಲ್ಲಿ ಪಹಣಿಯಲ್ಲಿ ಸ್ಕೂಲು ಬದಲು ವಕ್ಫ್ ಸ್ವತ್ತು ಎಂದು ನಮೂದಾಗಿದೆ. ಸರ್ಕಾರಿ ಶಾಲೆಯ ಜಾಗದ ಉಳಿವಿಗಾಗಿ ಗ್ರಾಮಸ್ಥರು ಶಿಕ್ಷಕರು ನಿರಂತರ ಹೋರಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular