ಚಿಕ್ಕಬಳ್ಳಾಪುರ : ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿಂತಿದ್ದ ಟ್ಯಾಂಕರ್ಗೆ ಎಸ್ಯುವಿ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದೆ.
ಎಸ್ಯುವಿ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದಾಗ ಚಾಲಕ ನಿಂತಿದ್ದ ಟ್ಯಾಂಕರ್ಗೆ ಡಿಕ್ಕಿ ಹೊಡೆದು ನಾಲ್ವರು ಮಹಿಳೆಯರು ಸೇರಿದಂತೆ 13 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


