Sunday, July 26, 2026
Homeರಾಜ್ಯಚಿಕ್ಕಬಳ್ಳಾಪುರ : ಭೀಕರ ರಸ್ತೆ ಅಪಘಾತ 13 ಮಂದಿ ಸಾವು.

ಚಿಕ್ಕಬಳ್ಳಾಪುರ : ಭೀಕರ ರಸ್ತೆ ಅಪಘಾತ 13 ಮಂದಿ ಸಾವು.

ಚಿಕ್ಕಬಳ್ಳಾಪುರ : ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಎಸ್‌ಯುವಿ ಢಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರ ಚಿಕ್ಕಬಳ್ಳಾಪುರದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದೆ.

ಎಸ್‌ಯುವಿ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದಾಗ ಚಾಲಕ ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ನಾಲ್ವರು ಮಹಿಳೆಯರು ಸೇರಿದಂತೆ 13 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular