Friday, July 31, 2026
Homeಜಿಲ್ಲೆಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ಮಳೆ ಅಬ್ಬರ : ಬೃಹತ್ ಮರ ಧರೆಗುರುಳಿ ಚಿಕ್ಕಮಗಳೂರು–ಶೃಂಗೇರಿ ಹೆದ್ದಾರಿಯಲ್ಲಿ...

ಚಿಕ್ಕಮಗಳೂರು : ಕಾಫಿನಾಡಲ್ಲಿ ಮುಂದುವರಿದ ಮಳೆ ಅಬ್ಬರ : ಬೃಹತ್ ಮರ ಧರೆಗುರುಳಿ ಚಿಕ್ಕಮಗಳೂರು–ಶೃಂಗೇರಿ ಹೆದ್ದಾರಿಯಲ್ಲಿ ಗಂಟೆಗೂ ಹೆಚ್ಚು ಟ್ರಾಫಿಕ್ ಜಾಮ್.

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಮಳೆ ಚುರುಕುಗೊಂಡಿದ್ದು, ಭಾರೀ ಗಾಳಿಯ ಪರಿಣಾಮ ಚಿಕ್ಕಮಗಳೂರು ತಾಲೂಕಿನ ಶಂಕರ್ ಫಾಲ್ಸ್ ಸಮೀಪ ಬೃಹತ್ ಮರ ರಸ್ತೆ ಮೇಲೆ ಧರೆಗುರುಳಿದ ಘಟನೆ ಶುಕ್ರವಾರ ನಡೆದಿದೆ.

ಮರ ಚಿಕ್ಕಮಗಳೂರು–ಶೃಂಗೇರಿ ರಾಜ್ಯ ಹೆದ್ದಾರಿಯ ಮೇಲೆ ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ರಸ್ತೆ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಮಳೆ ಸುರಿಯುತ್ತಿದ್ದ ನಡುವೆಯೇ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸಿದರು. ಬಳಿಕ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು. ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಭಾರೀ ಮಳೆ ಮುಂದುವರಿದಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular