Tuesday, December 3, 2024
Flats for sale
Homeರಾಜ್ಯಚಿಕ್ಕಮಗಳೂರು: ಚಾರ್ಮಾಡಿ ಘಾಟಿ,ಮುಳ್ಳಯ್ಯನಗಿರಿ,ಚಂದ್ರದ್ರೋಣ ಪರ್ವತ ಅಪಾಯಕಾರಿ : ಜಿಯೋಲಾಜಿಕಲ್ ಸರ್ವೇ ವರದಿ..!

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ,ಮುಳ್ಳಯ್ಯನಗಿರಿ,ಚಂದ್ರದ್ರೋಣ ಪರ್ವತ ಅಪಾಯಕಾರಿ : ಜಿಯೋಲಾಜಿಕಲ್ ಸರ್ವೇ ವರದಿ..!

ಚಿಕ್ಕಮಗಳೂರು : ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿತದಿಂದ ಹಲವು ಸಾವು ನೋವು ಸಂಭವಿಸಿದ ಹಿನ್ನೆಲೆ ಇದೀಗ ರಾಜ್ಯಸರಕಾರ ಹೆಚ್ಚೆತ್ತು ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ತಂಡ ವರದಿ ಸಲ್ಲಿಕೆ ಮಾಡಿದೆ. ವರದಿಯಲ್ಲಿ ಅನೇಕ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿವೆ. ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ.

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿರುವ ವರದಿ, ಆ ಸ್ಥಳಗಳ ಹೆಸರು ಉಲ್ಲೇಖಿಸಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತ ಸಂಭವಿಸುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಸೃಷ್ಟಿಯಾಗಿದೆ ಎಂದು ವರದಿ ಹೇಳಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗುತ್ತಿದೆ ಎಂದು ವರದಿ ಹೇಳಿದೆ

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಜಿಯೋಲಾಜಿಕಲ್ ಸರ್ವೇ ತಂಡ ಸಮೀಕ್ಷೆ ನಡೆಸಿ ವರದಿಯನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್​ಗೆ ವರದಿ ಸಲ್ಲಿಸಿದೆ. ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟಿ ಬಹಳ ಅಪಾಯಕಾರಿ ಪ್ರದೇಶಗಳಾಗಿ ಪರಿಣಮಿಸಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲುಗಳಲ್ಲಿ ವಾಹನ ದಟ್ಟಣೆ ಕಡಿಮೆ ಮಾಡುವಂತೆ ವರದಿಯಲ್ಲಿ ಸಲಹೆ ನೀಡಲಾಗಿದೆ. ಶೇ 80ರಷ್ಟು ಅವೈಜ್ಞಾನಿಕ ಕಾಮಗಾರಿಯಿಂದ ಪಶ್ಚಿಮ ಘಟ್ಟಗಳ ಸಾಲು, ಮಲೆನಾಡು ಭಾಗದಲ್ಲಿ ಭೂಕುಸಿತದ ಭೀತಿ ಉಂಟಾಗಿದೆ ಎಂದು ವರದಿ ತಿಳಿಸಿದೆ. ಅಷ್ಟೇ ಅಲ್ಲದೆ, ಚಿಕ್ಕಮಗಳೂರು ಜಿಲ್ಲೆಯ 88 ಅಪಾಯಕಾರಿ ಸ್ಥಳಗಳ ಬಗ್ಗೆ ವರದಿಯಲ್ಲಿ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 88 ಅತ್ಯಂತ ಅಪಾಯಕಾರಿ ಸ್ಥಳಗಳಿವೆ ಎಂದು ಉಲ್ಲೇಖಿಸಿರುವ ವರದಿ, ಆ ಸ್ಥಳಗಳ ಹೆಸರು ಉಲ್ಲೇಖಿಸಿದೆ. ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ, ಭೂ ಕುಸಿತ ಸಂಭವಿಸುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ರಸ್ತೆ ಕಾಮಗಾರಿ ಮಾಡದೆ ಅವಾಂತರ ಸೃಷ್ಟಿಯಾಗಿದೆ ಎಂದು ವರದಿ ಹೇಳಿದೆ. ಅತಿಹೆಚ್ಚು ಕಾಮಗಾರಿಗಳಿಂದ ಪಶ್ಚಿಮ ಘಟ್ಟಗಳ ಸಾಲಿಗೆ ಹಾನಿಯಾಗುತ್ತಿದೆ ಎಂದು ಹೇಳಿದೆ. ಒಂದು ವಾರ ಕಾಲ ಚಿಕ್ಕಮಗಳೂರು ಜಿಲ್ಲೆಯಲ್ಲಿ ತಂಡ ಸಮೀಕ್ಷೆ ನಡೆಸಿತ್ತು. ಇದೀಗ ಅಂತಿಮವಾಗಿ ವರದಿ ಸಲ್ಲಿಕೆ ಮಾಡಿದೆ.

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಚಿಕ್ಕಮಗಳೂರು ಜಿಲ್ಲೆಯ ಎನ್​.ಆರ್​.ಪುರ ತಾಲೂಕಿನ ಬನ್ನೂರು ಗ್ರಾ.ಪಂ. ವ್ಯಾಪ್ತಿಯ ಜಕನಕ್ಕಿ ಗ್ರಾಮದ ಬಳಿ ಭೂಕುಸಿತ ಸಂಭವಿಸಿದೆ.ಇದೀಗ ಸರಕಾರ ಮುಂಜಾಗೃತಾ ಕ್ರಮವಾಗಿ ದಟ್ಟ ವಾಹನಗಳ ಸಂಚಾರ ಸ್ವಲ್ಪ ದಿನದ ಮಟ್ಟಿಗೆ ನಿಷೇಧಿಸುವ ಸಾಧ್ಯತೆವಿದೆಯೆಂದು ಮಾಹಿತಿ ದೊರೆತಿದೆ .

RELATED ARTICLES

LEAVE A REPLY

Please enter your comment!
Please enter your name here

Most Popular