Monday, March 16, 2026
Flats for sale
Homeಜಿಲ್ಲೆಚಿಕ್ಕಮಗಳೂರು ; ಚಾರ್ಮಾಡಿ ಘಾಟಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು,ನೂರಾರು ಎಕರೆ ಅರಣ್ಯ ನಾಶ…!

ಚಿಕ್ಕಮಗಳೂರು ; ಚಾರ್ಮಾಡಿ ಘಾಟಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು,ನೂರಾರು ಎಕರೆ ಅರಣ್ಯ ನಾಶ…!

ಚಿಕ್ಕಮಗಳೂರು ; ಭಾರಿ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದ ಘಟನೆ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಹಾಸ ಪಟ್ಟಿದ್ದು ಸ್ಥಳೀಯರಲ್ಲಿ ಆತಂಕ ವ್ಯಕ್ತವಾಗಿದೆ.ಶುಕ್ರವಾರ ಸಂಜೆ ಘಟನೆ ನಡೆದಿದ್ದು,ಬೆಂಕಿಯ ಕೆನ್ನಾಲಿಗೆ 10 ಕಿ.ಲೋ ಮೀಟರ್ ದೂರಕ್ಕೂ ವ್ಯಾಪಿಸಿದೆ.

ಕಾಡಿನಲ್ಲಿ ಬೆಂಕಿ ಹೊತ್ತಿಕೊಂಡು ಎರಡು ಗಂಟೆ ಕಳೆದರೂ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬಂದಿದ್ದು ಈ ಭಾಗದಲ್ಲಿ ವನ್ಯಜೀವಿ ಮತ್ತು ಸಸ್ಯ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ಸರಿಯಿಲ್ಲ ಎಂದು ಸ್ಥಳೀಯರು ಕೆಂಡಕಾರಿದ್ದಾರೆ.

ಕಳೆದ ವರ್ಷ ಮಾರ್ಚ್‌ ತಿಂಗಳಿನಲ್ಲಿ ಕೂಡ ಪಶ್ಚಿಮಘಟ್ಟಗಳ ಉದ್ದಕ್ಕೂ ಆವರಿಸಿತ್ತು. ಮೊದಲ ಬಾರಿಗೆ ಮಂಗಳೂರು-ಬೆಂಗಳೂರು ಮಾರ್ಗದ ಸುಬ್ರಹ್ಮಣ್ಯ ರಸ್ತೆ-ಸಕಲೇಶಪುರ ಘಾಟ್ ವಿಭಾಗದಲ್ಲಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

Most Popular