ಚಿಕ್ಕಮಗಳೂರು : ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದ ಬಳಿ ಪಲ್ಟಿಯಾಗಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ 40 ಕ್ಕೂ ಹೆಚ್ಚು ಯುವಕರು ಮತ್ತು ಯುವತಿಯರು ವಾರಾಂತ್ಯದ ನೇತ್ರಾವತಿ ಶಿಖರಕ್ಕೆ ಚಾರಣಕ್ಕೆ ಬಂದಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರಣ ಬಸ್ ತಿರುವಿನಲ್ಲಿ ಉರುಳಿಬಿದ್ದಿದೆ.
ಗಾಯಾಳುಗಳನ್ನು ಮೂಡಿಗೆರೆ ಮತ್ತು ಚಿಕ್ಕಮಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.