ಚಿಕ್ಕಮಗಳೂರು : ದೇಶದಲ್ಲಿ ಇನ್ನೇನು ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವುದರ ನಡುವೆ ಆಯಾಯ ಜಿಲ್ಲೆಯ ತಾಲೂಕಿನ ಅಧ್ಯಕ್ಷರ ನೇಮಕ ಜೋರಾಗಿ ನಡೆಯುತ್ತಿದ್ದು ಹಲವೆಡೆ ಬಿಜೆಪಿ ಕಾರ್ಯಕರ್ತರಲ್ಲಿ ಭಿನ್ನಮತ ಮೂಡಿತ್ತು.ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು . ಮೂಡಿಗೆರೆ ತಾಲೂಕು ಅಧ್ಯಕ್ಷ ನೇಮಕ ವಿಚಾರದಲ್ಲಿ ಬಿಜೆಪಿ ಮುಖಂಡರು ಹೊಡೆದಾಡಿಕೊಂಡಿದ್ದಾರೆ.ಮಧ್ಯೆ ಬೀದಿಯಲ್ಲಿ ಹೊಡೆದಾಟದ ವಿಡಿಯೋ ವೈರಲ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.
ಈ ನಡುವೆ ಕರ್ನಾಟಕ ಬಿಜೆಪಿಯಲ್ಲಿರುವ ಅಸಮಾಧಾನಗಳನ್ನು ಬಿವೈ ವಿಜಯೇಂದ್ರ ಹಾಗೂ ಯಡಿಯೂರಪ್ಪ ಒಂದೊಂದಾಗಿಯೇ ಬಗೆಹರಿಸುತ್ತಿದ್ದಾರೆ. ಮೂಡಿಗೆರೆ ನೂತನ ಅಧ್ಯಕ್ಷರನ್ನಾಗಿ ಗಜೇಂದ್ರ ಅವರನ್ನು ನೇಮಕ ಮಾಡಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಆದೇಶ ಹೊರಡಿಸಿದ್ದು, ಇದರ ಬೆನ್ನಲ್ಲೇ ಇನ್ನುಳಿದ ಆಕಾಂಕ್ಷಿಗಳ ಆಕ್ರೋಶದ ಕಟ್ಟೆ ಹೊಡೆದಿದೆ.
ಜಿಲ್ಲೆಯಲ್ಲಿ ಯಾರು ಅರ್ಹರು ಎಂಬ ವರಿಷ್ಠರ ಮಾಹಿತಿಮೇರೆಗೆ ನೇಮಕ ನಡೆದಿತ್ತು.ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ಸ್ಥಾನಕ್ಕೆ 12 ಮಂದಿ ಆಕಾಂಕ್ಷಿಗಳಿದ್ದು.ಈ ಪೈಕಿ ಇಂದು ಗಜೇಂದ್ರ ಅವರನ್ನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ಗಲಾಟೆ ಮಾಡಿದ್ದಾರೆ. ಈ ವೇಳೆ .ರತನ್ ಅವರಿಗೆ ಗಾಯವಾಗಿದೆ.
ಮೂಡಿಗೆರೆ ಪಟ್ಟಣದ ಬಿಜೆಪಿ ಕಚೇರಿಯ ಮುಂಭಾಗ ಹೊಡೆದಾಟ ನಡೆದಿದ್ದು, ಇದರಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಸಿ. ರತನ್ ಅವರಿಗೆ ಗಾಯವಾಗಿದ್ದು,ಕೂಡಲೇ ಅವರನ್ನು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.


