Monday, September 21, 2026
Homeಜಿಲ್ಲೆಚಿಕ್ಕಮಗಳೂರು : ತಾಲೂಕು ಪಂಚಾಯಿತಿ ಇಓ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ,ದೂರು ದಾಖಲು.

ಚಿಕ್ಕಮಗಳೂರು : ತಾಲೂಕು ಪಂಚಾಯಿತಿ ಇಓ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ,ದೂರು ದಾಖಲು.

ಚಿಕ್ಕಮಗಳೂರು : ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ (ಇಓ) ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಶೃಂಗೇರಿ ತಾಲೂಕು ಪಂಚಾಯಿತಿ ಇಓ ಸುದೀಪ್ ಅವರ ಮೇಲೆ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕಡಿಗೆ ರವೀಂದ್ರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಶನಿವಾರ ಬಾಳೆಹೊನ್ನೂರಿನಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿ ಸಂಬಂಧ ನಡೆದ ಸಭೆಯಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಸಭೆ ಮುಗಿಸಿ ರಾತ್ರಿ ಊಟಕ್ಕಾಗಿ ಹೋಟೆಲ್‌ಗೆ ತೆರಳಿದ್ದ ಇಓ ಸುದೀಪ್, ಊಟ ಮುಗಿಸಿ ಹೊರಬಂದಾಗ ಹೇರೂರು ಬಳಿ ಅಡ್ಡಗಟ್ಟಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಇಓ ಸುದೀಪ್ ಅವರು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕಡಿಗೆ ರವೀಂದ್ರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಸುದೀಪ್ ಅವರಿಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದೇ ವೇಳೆ, ನಾಗೇಶ್ ಎಂಬುವರು ಕೂಡ ಇಓ ಸುದೀಪ್ ವಿರುದ್ಧ ದೂರು ನೀಡಿದ್ದು, ತಮ್ಮ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳ ಆಧಾರದ ಮೇಲೆ ಬಾಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular