Saturday, June 6, 2026
Flats for sale
Homeಜಿಲ್ಲೆಚಿಕ್ಕಮಗಳೂರು : ದತ್ತಪೀಠದಲ್ಲಿ ಮತ್ತೆ ಮಾಂಸಹಾರ ಸೇವನೆ ಆರೋಪ..?; ಜಿಲ್ಲಾಡಳಿತದ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ.

ಚಿಕ್ಕಮಗಳೂರು : ದತ್ತಪೀಠದಲ್ಲಿ ಮತ್ತೆ ಮಾಂಸಹಾರ ಸೇವನೆ ಆರೋಪ..?; ಜಿಲ್ಲಾಡಳಿತದ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ.

ಚಿಕ್ಕಮಗಳೂರು : ಜಿಲ್ಲೆಯ ವಿವಾದಿತ ದತ್ತಪೀಠದಲ್ಲಿ ಮತ್ತೆ ಮಾಂಸಾಹಾರ ಸೇವನೆ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ದತ್ತಪೀಠದ ಯಾಗಶಾಲೆ ಸಮೀಪದಲ್ಲೇ ಮಾಂಸಾಹಾರ ಸೇವನೆ ನಡೆದಿರುವುದಾಗಿ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಆರೋಪಿಸಿದ್ದಾರೆ.

ಹುಣ್ಣಿಮೆ ಪೂಜೆಗೆ ತೆರಳಿದ ವೇಳೆ ಈ ವಿಚಾರ ಗಮನಕ್ಕೆ ಬಂದಿದ್ದು, ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ವೈಫಲ್ಯದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದತ್ತಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆಗೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ನಡೆದಿದೆ ಎಂದು ಆರೋಪಿಸಲಾಗಿದೆ.

ಹಿಂದೂ-ಮುಸ್ಲಿಮರ ಧಾರ್ಮಿಕ ಭಾವೈಕ್ಯತೆಯ ಸಂಕೇತವಾಗಿರುವ ದತ್ತಪೀಠದ ಉಮೇದುವಾರಿಕೆ ಸಂಬಂಧ ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿರುವ ನಡುವೆಯೇ ಈ ಬೆಳವಣಿಗೆ ಹೊಸ ವಿವಾದಕ್ಕೆ ಕಾರಣವಾಗಿದೆ.

ಘಟನೆ ಕುರಿತು ಜಿಲ್ಲಾಡಳಿತದ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದ್ದು, ಆರೋಪಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular