Friday, July 24, 2026
Homeಕ್ರೈಂಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನ : ಮಂಗಳೂರಿನ ವ್ಯಕ್ತಿ ಸೇರಿ ಇಬ್ಬರ...

ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆಗೆ ಯತ್ನ : ಮಂಗಳೂರಿನ ವ್ಯಕ್ತಿ ಸೇರಿ ಇಬ್ಬರ ಬಂಧನ.

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ನೂತನ ಲೇಔಟ್‌ನಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಮಹಮದ್ ಅಲಿ ಹಾಗೂ ಮೂಡಿಗೆರೆಯ ಮಹೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ₹200 ಮುಖಬೆಲೆಯ 90 ಖೋಟಾ ನೋಟುಗಳು, ಒಟ್ಟು ₹18,000 ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರಿನಿಂದ ಬಂದಿದ್ದ ಮಹಮದ್ ಅಲಿ ಖೋಟಾ ನೋಟುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಪತ್ತೆಯಾದ ನಕಲಿ ನೋಟುಗಳ ಮೇಲೆ “Reserve Bank of India” ಬದಲಿಗೆ “Bisarv Bank of India” ಎಂದು ಮುದ್ರಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖೋಟಾ ನೋಟುಗಳ ಮೂಲ ಹಾಗೂ ಜಾಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular