Saturday, August 1, 2026
Homeರಾಜ್ಯಚಿಕ್ಕಮಗಳೂರು ; ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು,ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

ಚಿಕ್ಕಮಗಳೂರು ; ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು,ಪ್ರಯಾಣಿಕರು ಪ್ರಾಣಪಾಯದಿಂದ ಪಾರು.

ಚಿಕ್ಕಮಗಳೂರು : ರಸ್ತೆ ಮಧ್ಯೆ ಕಾರೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರಿನಿಂದ ಕೊಪ್ಪ ಸಮೀಪದ ನಿಲುವಾಗಿಲು ಗ್ರಾಮಕ್ಕೆ ಬರುತ್ತಿದ್ದ ವೇಳೆ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಪ್ರಯಾಣಿಕರು ಕಾರಿನಿಂದ ಇಳಿದ ಪರಿಣಾಮ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಸಂಬಂಧ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular