Sunday, June 21, 2026
Flats for sale
Homeಜಿಲ್ಲೆಚಿಕ್ಕಮಗಳೂರು : ಲಾಂಗ್ ಹಿಡಿದು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ, ಮೂಡಿಗೆರೆ ಶಾಸಕಿ ನಯನ ಮೋಟಮ್ಮ...

ಚಿಕ್ಕಮಗಳೂರು : ಲಾಂಗ್ ಹಿಡಿದು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ, ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಆಪ್ತನ ರೌಡಿಸಂ ; ವಿಡಿಯೋ ವೈರಲ್.

ಚಿಕ್ಕಮಗಳೂರು : ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಐದಳ್ಳಿ ಗ್ರಾಮದಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಮೂಡಿಗೆರೆ ಶಾಸಕಿಯ ಆಪ್ತ ಹಾಗೂ ಆಲ್ದೂರು ಮಾಜಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ತೇಜಸ್ ವಿರುದ್ಧ ಈ ಆರೋಪ ಕೇಳಿಬಂದಿದೆ. ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮದ ಪೂರ್ವಸಿದ್ಧತೆ ವೇಳೆ ಹಳೆಯ ದ್ವೇಷದ ಹಿನ್ನೆಲೆ ದಯಾನಂದ್ ಎಂಬುವವರೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಅದು ವಾಗ್ವಾದಕ್ಕೆ ತಿರುಗಿದೆ ಎನ್ನಲಾಗಿದೆ.

ಈ ವೇಳೆ ದಯಾನಂದ್ ಅವರಿಗೆ ಲಾಂಗ್ ತೋರಿಸಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. “ಕತ್ತಿ ಬಿಟ್ಟು ಬಾ, ನಾನು ನೋಡ್ತೀನಿ” ಎಂಬ ಮಾತುಗಳ ನಡುವೆ ಕಾರಿನಲ್ಲಿದ್ದ ಲಾಂಗ್ ತೆಗೆದು ಬೆದರಿಕೆ ಹಾಕಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಘಟನೆಯಿಂದ ಐದಳ್ಳಿ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಡಿಯೋ ಹಾಗೂ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಆರೋಪಗಳ ಸತ್ಯಾಸತ್ಯತೆ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ತಿಳಿದುಬರಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular