Tuesday, October 21, 2025
Flats for sale
Homeರಾಜ್ಯಚಿಕ್ಕಮಗಳೂರು : ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ,ಮುಳ್ಳಯ್ಯನಗಿರಿ ಚಾರಣಕ್ಕೆ ನಿಷೇಧ !

ಚಿಕ್ಕಮಗಳೂರು : ಸುಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜ,ಮುಳ್ಳಯ್ಯನಗಿರಿ ಚಾರಣಕ್ಕೆ ನಿಷೇಧ !

ಚಿಕ್ಕಮಗಳೂರು : ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಮಲೆನಾಡ ಮಳೆಗೆ ಜಿಲ್ಲೆಯ ಪ್ರವಾಸಿ ತಾಣಗಳು ತನ್ನ ನೈಜ ಸೊಬಗನ್ನ ಅನಾವರಣಗೊಳಿಸಿವೆ. ಅದರಂತೆ ಎತ್ತಿನಭುಜ ಪ್ರವಾಸಿತಾಣ ಕೂಡ ನೈಜ ಸೊಬಗಿನಿಂದ ಕಂಗೊಳಿಸುತ್ತಿದೆ. ಜೊತೆಗೆ, ಪ್ರವಾಸಿಗರಿಗೆ ಚಾರಣಕ್ಕೆ ಹೋಗಲು ಕೂಡ ಈ ಪ್ರದೇಶ ನೆಚ್ಚಿನ ತಾಣವಾಗಿದೆ.

ಮುಂಗಾರು ಸಮಯದಲ್ಲಿ ಚಿಕ್ಕಮಗಳೂರಿನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ. ಆದರೆ ಇದೀಗ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.

ಕಳೆದ ಶನಿವಾರದಿಂದ ಸೋಮವಾರದವರೆಗೆ ಮೂರು ದಿನದಲ್ಲಿ 20,000ಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಈಗಾಗಲೇ ಕಳೆದ ಕೆಲ ತಿಂಗಳ ಹಿಂದೆ ಅರಣ್ಯ ಸಚಿವ ಈಶ್ವರ ಖಂಡ್ರೆ ರಾಜ್ಯದ ಪ್ರವಾಸಿ ತಾಣಗಳಿಗೆ ಆನ್ಲೈನ್ ಟಿಕೆಟ್ ಮೂಲಕ ದಿನಕ್ಕೆ ನಿರ್ದಿಷ್ಟ ಪ್ರವಾಸಿಗರಿಗೆ ಮಾತ್ರ ಅವಕಾಶ ಕಲ್ಪಿಸಬೇಕೆಂದು ಸೂಚನೆ ನೀಡಿದ್ದರು. ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.ಸರ್ಕಾರ ಆನ್ಲೈನ್ ಟಿಕೆಟ್ ಮೂಲಕ ಪ್ರವಾಸಿಗರು ಹೋಗಬೇಕೆಂಬ ನಿಯಮವಿದ್ದರೂ ಪ್ರವಾಸಿ ತಾಣಗಳಲ್ಲಿನ ಜನಜಂಗುಳಿ ಕಂಡು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮದ ಎಚ್ಚರಿಕೆ ನೀಡಿದೆ. ಹಾಗಾಗಿ, ಅರಣ್ಯ ಇಲಾಖೆ ಮುಂಜಾಗ್ರತ ಕ್ರಮವಾಗಿ ಎತ್ತಿನ ಭುಜ ಪ್ರದೇಶದಲ್ಲಿ ಟ್ರಕಿಂಗ್ ಹೋಗುವ ಪ್ರವಾಸಿಗರ ಸುರಕ್ಷತೆಯ ಹಿತ ದೃಷ್ಟಿಯಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾಮಗಾರಿ ಅನುಷ್ಠಾನ ಗೊಳ್ಳಲಿರುವ ಕಾರಣ ಎತ್ತಿನ ಭುಜಕ್ಕೆ ಮುಂದಿನ ಆದೇಶದವರೆಗೂ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular