ಚಿತ್ರದುರ್ಗ : ಬೊಮ್ಮಕ್ಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವತಾಲ (35), ರೆಹಮಾನ್ (15) ಎಂದು ತಿಳಿದಿದೆ. ಘಟನೆಯಲ್ಲಿ ಮೂರು ಮಂದಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರಿಂದ ಯಾದಗಿರಿಗೆ ತೆರಳುವ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದ್ದು. ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ