Monday, March 16, 2026
Flats for sale
Homeಕ್ರೈಂಚಿತ್ರದುರ್ಗ : ಮಗುವನ್ನು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನೆ,ಸ್ಟಾರ್ಟ್ ಅಪ್ ಫೌಂಡರ್ &...

ಚಿತ್ರದುರ್ಗ : ಮಗುವನ್ನು ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ಶವ ರವಾನೆ,ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಸೇಠ್ ಬಂಧನ.

ಚಿತ್ರದುರ್ಗ : ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಆಗಿರುವ ಸುಚನಾ ಸೇಠ್ ರವರನ್ನು ಗೋವಾದ ಹೋಟೆಲ್​ವೊಂದರಲ್ಲಿ ತಮ್ಮ ಮಗನ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸ್ಟಾರ್ಟ್ ಅಪ್ ಫೌಂಡರ್ & ಸಿಇಓ ಸುಚನಾ ಅವರು ಗೋವಾದ ಹೋಟೆಲ್​ನಲ್ಲಿಉಳಿದುಕೊಂಡಿದ್ದರು.ಇನ್ನೇನು ಹೋಟೆಲ್​ನಿಂದ ಬೆಂಗಳೂರಿಗೆ ಹೋಗಲು ತಮ್ಮ ಸೂಟ್ ಕೇಸ್ ಹಿಡಿದು ಟ್ಯಾಕ್ಸಿಯತ್ತ ಹೊರಟಾಗ ಆ ವೇಳೆ ಹೋಟೆಲ್ ಸಿಬ್ಬಂದಿ ಹಾಗು ಟ್ಯಾಕ್ಸಿ ಡ್ರೈವರ್ ನಿಮ್ಮ ಮಗು ಎಲ್ಲಿ ಎಂದು ಕೇಳಿದಾಗ ಮಗುವನ್ನು ಸಂಬಂದಿಕರ ಜೊತೆ ಕಳುಹಿಸದ್ದೇನೆ ಎಂದು ಹೇಳಿದ್ದಾರೆ, ಈ ವೇಳೆ ಹೋಟೆಲ್ ಸಿಬ್ಬಂದಿ ಸುಚನಾ ಸೇಠ್ ಉಳಿದುಕೊಂಡ ಕೊಠಡಿಯನ್ನು ಪರಿಶೀಲನೆಮಾಡಿದ್ದಾಗ ಅಲ್ಲಿ ರಕ್ತದ ಕಲೆಗಳು ಪತ್ತೆ ಆಗಿವೆ ಇದನ್ನು ಗಮನಿಸಿದ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್ ಸಿಬ್ಬಂದಿ ಗೋವಾ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪೊಲೀಸರು ನಂಬರ್ ಹುಡುಕಿ ಸುಚನಾ ಪ್ರಯಾಣಿಸುತ್ತಿದ್ದ ಟ್ಯಾಕ್ಸಿ ಡ್ರೈವರ್​ಗೆ ಕರೆ ಮಾಡಿದ್ದಾರೆ.ಹೈವೇ ಬಳಿ ಪೊಲೀಸ್ ಠಾಣೆ ಕಂಡಾಕ್ಷಣ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಪೊಲೀಸರ ಸೂಚನೆಯಂತೆ ರಾಷ್ಟ್ರೀಯ ಹೆದ್ದಾರಿ 4ರ ಐಮಂಗಲ ಠಾಣೆ ಬಳಿ ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದು ಪರಿಶೀಲನೆ ನಡೆಸಿದಾಗ ಸೂಟ್ ಕೇಸ್ ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ಶವವನ್ನು ಶವಾಗಾರಕ್ಕೆ ಶಿಫ್ಟ್ ಮಾಡಿ ಆರೋಪಿ ಸುಚನಾಳನ್ನ ವಶಕ್ಕೆ ಪಡೆಯಲಾಗಿದೆ. ಈ ಘಟನೆ ಸಂಬಂಧ ಗೋವಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆದಷ್ಟು ಬೇಗ ಆರೋಪಿಯನ್ನು ಗೋವಾ ಪೊಲೀಸರಿಗೆ ಒಪ್ಪಿಸಲಾಗುತ್ತೆ ಎಂದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular