Saturday, March 14, 2026
Flats for sale
Homeರಾಜ್ಯಚಿತ್ರದುರ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದ ಛಾಯಾಗ್ರಹಕ ಸ್ಥಳದಲ್ಲೇ...

ಚಿತ್ರದುರ್ಗ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದ ಛಾಯಾಗ್ರಹಕ ಸ್ಥಳದಲ್ಲೇ ಸಾವು.

ಚಿತ್ರದುರ್ಗ : ವಿವಾಹ ಕಾರ್ಯಕ್ರಮಕ್ಕೆ ತೆರಳಿದ್ದ ಛಾಯಾಗ್ರಾಹಕನ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ದುರ್ದೈವಿ ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿ ಯ ಪೋಟೋ ಗ್ರಾಪರ್ ಅಭಿಷೇಕ್ (30) ಎಂದು ತಿಳಿದುಬಂದಿದೆ. ಮೃತ ಪಟ್ಟ ಛಾಯಗ್ರಾಹಕ ಮೊಳಕಾಲ್ಮೂರು ತಾಲ್ಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಪೋಟೋ ತೆಗೆಯಲು ಹೋಗಿ ವಾಪಸ್ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಗುರುವಾರ ತಡರಾತ್ರಿ 12 ಗಂಟೆ ಸುಮಾರಿನಲ್ಲಿ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150A ರ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಅಪಘಾತದಲ್ಲಿ ಪೋಟೋ ಗ್ರಾಪರ್ ಅಭಿಷೇಕ್ ಸ್ಥಳದಲ್ಲಿಯೇ ಸಾವನಪ್ಪಿದ್ದು . ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ . ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದು ಪ್ರಕರಣದ ತನಿಖೆ ನಡೆಯುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular