Sunday, May 10, 2026
Flats for sale
Homeರಾಜ್ಯಚಿತ್ರದುರ್ಗ ; ಸಚಿವ ಡಿ. ಸುಧಾಕರ್ ನಿಧನ : ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು.

ಚಿತ್ರದುರ್ಗ ; ಸಚಿವ ಡಿ. ಸುಧಾಕರ್ ನಿಧನ : ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರು.

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಹಿರಿಯೂರು ಕ್ಷೇತ್ರದ ಶಾಸಕ ಡಿ. ಸುಧಾಕರ್ ಅವರು ಅನಾರೋಗ್ಯದಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ 65 ವರ್ಷ ವಯಸ್ಸಾಗಿತ್ತು. ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮೊದಲು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ 3:15ಕ್ಕೆ ಕೊನೆಯುಸಿರೆಳೆದರು.

ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ KPCC ಕಚೇರಿಯಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಬಳಿಕ ಹಿರಿಯೂರಿಗೆ ಕರೆದೊಯ್ಯಲಾಗುತ್ತಿದೆ. ಹಿರಿಯೂರಿನ ನೆಹರೂ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಂತಿಮ ದರ್ಶನ ಮತ್ತುಅಂತ್ಯಕ್ರಿಯೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿವೆ. ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಹಾಗೂ ಜಿಲ್ಲಾಧಿಕಾರಿ ಡಿ. ವೆಂಕಟೇಶ್ ಹಿರಿಯೂರಿನತ್ತ ತೆರಳಿದ್ದಾರೆ. ಚಳ್ಳಕೆರೆದಲ್ಲಿರುವ ಡಿ. ಸುಧಾಕರ್ ಕ್ರೀಡಾಂಗಣದಲ್ಲಿ ಜೈನ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular