ಚೆನ್ನೈ : ಸಿಂಗಾಪೂರದಲ್ಲಿ ವಿಶ್ವ ಚೆಸ್ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದು ಸ್ವದೇಶಕ್ಕೆ ಮರಳಿದ ಡಿ.ಗುಕೇಶ್ ಅವರನ್ನು ಸ್ವಾಗತಿಸಲು ಸೋಮವಾರ ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು.
18 ವರ್ಷದ ವಿಶ್ವನಾಥನ್ ಆನಂದ್ ನಂತರ ಗುಕೇಶ್ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಎರಡನೇ ಭಾರತೀಯರಾಗಿದ್ದಾರೆ. ಡಿ.ಗುಕೇಶ್ ಅವರಿಗೆ ತಮಿಳುನಾಡು ಕ್ರೀಡಾ ಅಭಿವೃದ್ಧಿ ಪ್ರಾಧಿಕಾರದ (ಎಸ್ಡಿಎಟಿ)
ಅಧಿಕಾರಿಗಳು ಮತ್ತು ನಗರದ ಚೆಸ್ನ ಪ್ರಮುಖ ಕೇಂದ್ರವಾದ ಪ್ರಸಿದ್ಧ ವೇಲಮ್ಮಾಳ್ ವಿದ್ಯಾಲಯದ ವಿದ್ಯಾರ್ಥಿಗಳು ವಿಶೇಷ ಸ್ವಾಗತವನ್ನು ನೀಡಿದ್ದಾರೆ.
ಇಂದು ಬೆಳಗ್ಗೆ ತಮಿಳುನಾಡಿನ ರಾಜಧಾನಿ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗುಕೇಶ್ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಅಸಂಖ್ಯಾತ ಅಭಿಮಾನಿಗಳು ಭಾರತೀಯ ಧ್ವಜಗಳನ್ನು ಕೈಯಲ್ಲಿ ಹಿಡಿದು ಪ್ರದರ್ಶಿಸಿ ಪುಷ್ಪವೃಷ್ಟಿಯೊಂದಿಗೆ ಸ್ವಾಗತಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಗುಕೇಶ್,ತಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.