Tuesday, October 21, 2025
Flats for sale
Homeದೇಶಜೈಪುರ : ರಾಜಸ್ಥಾನದಲ್ಲಿ ಶಾಲಾ ಕಟ್ಟಡ ಕುಸಿದು 4 ಮಕ್ಕಳು ಸಾವು, 40 ಮಕ್ಕಳು ಅವಶೇಷಗಳಡಿ...

ಜೈಪುರ : ರಾಜಸ್ಥಾನದಲ್ಲಿ ಶಾಲಾ ಕಟ್ಟಡ ಕುಸಿದು 4 ಮಕ್ಕಳು ಸಾವು, 40 ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ..!

ಜೈಪುರ : ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಶುಕ್ರವಾರ ಸರ್ಕಾರಿ ಶಾಲಾ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಹಲವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮನೋಹರ್ ಥಾನಾದ ಪಿಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಈ ಘಟನೆ ನಡೆದಿದೆ. ಒಂದೇ ಅಂತಸ್ತಿನ ಕಟ್ಟಡದ ಮೇಲ್ಛಾವಣಿ ಕುಸಿದಾಗ ಶಿಕ್ಷಕರು ಮತ್ತು ಸಿಬ್ಬಂದಿ ಸದಸ್ಯರಲ್ಲದೆ ಸುಮಾರು 40 ಮಕ್ಕಳು ಆವರಣದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಕಟ್ಟಡವು ಶಿಥಿಲಾವಸ್ಥೆಯಲ್ಲಿತ್ತು ಮತ್ತು ಈ ಸಂಬಂಧ ಈ ಹಿಂದೆ ಹಲವಾರು ದೂರುಗಳು ಬಂದಿವೆ. ಶಾಲೆಯು 8 ನೇ ತರಗತಿಯವರೆಗೆ ಶಿಕ್ಷಣವನ್ನು ನೀಡುತ್ತದೆ.

“ನಾಲ್ಕು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ. ಹತ್ತು ಮಕ್ಕಳನ್ನು ಝಾಲಾವರ್‌ಗೆ ಕಳುಹಿಸಲಾಗಿದೆ, ಅದರಲ್ಲಿ ಮೂರರಿಂದ ನಾಲ್ವರ ಸ್ಥಿತಿ ಗಂಭೀರವಾಗಿದೆ” ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸ್ಥಳದಿಂದ ಬಂದ ದೃಶ್ಯಗಳಲ್ಲಿ ಸಿಕ್ಕಿಬಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ರಕ್ಷಿಸಲು ಸ್ಥಳೀಯ ನಿವಾಸಿಗಳು ಧಾವಿಸುತ್ತಿರುವುದನ್ನು ತೋರಿಸಲಾಗಿದೆ. ಅವಶೇಷಗಳನ್ನು ತೆರವುಗೊಳಿಸಲು ಕನಿಷ್ಠ ನಾಲ್ಕು ಜೆಸಿಬಿ ಯಂತ್ರಗಳು ಸ್ಥಳಕ್ಕೆ ಬಂದಿದ್ದು ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular