ಢಾಕಾ : ಪಶ್ಚಿಮ ಬಂಗಾಳದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಬಾಂಗ್ಲಾದೇಶ ಸಂಸತ್ತಲ್ಲೇ ಈ ಬಗ್ಗೆ ಹೇಳಿಕೆ ನೀಡಿರುವುದು ಗಮನ ಸೆಳೆದಿದೆ.
ಬಾಂಗ್ಲಾ ಸಂಸದ ಅಕ್ತರ್ ಹೊಸ್ಸಿಂ ಮಾತನಾಡಿ, ವೆಸ್ಟ್ ಬಂಗಾಳ ನಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರನ್ನು ಹಿಂತಿರುಗಿಸುವ ಸಾಧ್ಯತೆ ಇದೆ. ಇದರಿಂದ ಬಾಂಗ್ಲಾದೇಶಕ್ಕೆ ನಿರಾಶ್ರಿತರ ಸಮಸ್ಯೆ ಎದುರಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಅವರು ಹೇಳುವಂತೆ, ಬಿಜೆಪಿ ಸರ್ಕಾರ ಬಂದಲ್ಲಿ ಅಕ್ರಮವಾಗಿ ಇರುವ ಬಾಂಗ್ಲಾದೇಶಿಗರನ್ನು ಹೊರಹಾಕುವ ಕ್ರಮ ಕೈಗೊಳ್ಳಲಾಗಬಹುದು. ಇದರಿಂದ ಬಾಂಗ್ಲಾದೇಶಕ್ಕೆ ಆರ್ಥಿಕ ಹಾಗೂ ಸಾಮಾಜಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ನ್ಯಾಷನಲ್ ರಿಜಿಸ್ಟರ್ ಆ ಸಿಟಿಜನ್ಸ್ (ಎನ್‌ಆರ್‌ಸಿ) ಜಾರಿಯಾದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆಗ ದೊಡ್ಡ ಪ್ರಮಾಣದಲ್ಲಿ ಜನರು ಗಡಿ ದಾಟಿ ಬಾಂಗ್ಲಾಕ್ಕೆ ಮರಳುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆ ದಕ್ಷಿಣ ಏಷ್ಯಾದ ಭೌಗೋಳಿಕ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದೇ ವೇಳೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆಯ್ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ.


