ತುಮಕೂರು : ಭಾಗ್ಯಗಳ ಹೆಸರಲ್ಲಿ ಎಲ್ಲವನ್ನು ಕೊಟ್ಟರೂ ರಾಜ್ಯದಲ್ಲಿರುವ ಜಿಲ್ಲೆಯ ಬಿಸಿಎಂ ಹಾಸ್ಟೆಲ್ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ ಎಂಬ ಮಾಹಿತಿ ದೊರೆತಿದೆ.
ಬಿಸಿಎಂ ಇಲಾಖೆ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳಿಗೆ ಮಠದಿಂದ ಸುಮಾರು 80 ಚೀಲ ಅಕ್ಕಿ ಸಾಲ ಪಡೆದಿದ್ದಾರೆ. ಇಷ್ಟರವರೆಗೆ ಸರಕಾರ ಕೇವಲ ಬಾಯಿಮಾತಿನಲ್ಲಿ ಆ ಭಾಗ್ಯ ಈ ಭಾಗ್ಯ ಅಂತ ಬೊಗಳೆ ಬಿಡುತ್ತಿದ್ದು ಹಾಸ್ಟೆಲ್ಗಳಿಗೆ ಮಾತ್ರ ಕೊಡುವ ಆಹಾರ ಪದಾರ್ಥಗಳನ್ನು ಸರಿಯಾದ ಸಮಯದಲ್ಲಿ ಕೊಡದೆ ಇರವುದರಿಂದ ನಾವು ಮಠದಿಂದ ಸಾಲಪಡೆದಿದ್ದೇವೆ ಎಂದು ಹಾಸ್ಟೆಲ್ ನ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಅಕ್ಕಿ ಪೂರೈಕೆ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಆ ಮೂಲಕ ಸಾಲದ ಅಕ್ಕಿಯಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊಟ ಮಾಡಿಕೊಡಲಾಗುತ್ತಿದೆ ಎಂದು ಹೇಳಿದ್ದಾರೆ.
ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲದ ರೂಪದಲ್ಲಿ ಹಾಸ್ಟೆಲ್ಗಳು ಪಡೆದಿವೆ ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು ಕಳೆದ ಎರಡು ಮೂರು ತಿಂಗಳ ಹಿಂದೆ ಅಕ್ಕಿ ಕೊಟ್ಟಿದ್ದೇವೆ. ಬಿಸಿಎಂ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಪೂರೈಕೆ ವಿಳಂಬವಾಗಿ ಮಠದಿಂದ ಪಡೆದುಕೊಂಡಿದ್ದಾರೆ. ಹಲವು ಬಾರಿ ಸಾಲ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅದರ ಲೆಕ್ಕ ಇಲ್ಲ. ಅಕ್ಕಿ ತೆಗೆದುಕೊಂಡು ಹೋಗಿರುವುದು ಮಾತ್ರ ಗ್ಯಾರಂಟಿ ಎಂದು ತಿಳಿಸಿದ್ದಾರೆ.