ತುಮಕೂರು : ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಇಂದು (ಶುಕ್ರವಾರ) ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 80 ವರ್ಷದ ವೆಂಕಟರಮಣಪ್ಪ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಹೃದಯಾಘಾತದಿಂದ ಬೆಂಗಳೂರಿನ Fortis Hospital ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ.
ಪಾವಗಡ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದ ಅವರು, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿ ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ತುಮಕೂರು ಜಿಲ್ಲೆಯ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ವೆಂಕಟರಮಣಪ್ಪ ಅವರು ಮುಖ್ಯಮಂತ್ರಿ Siddaramaiah ಅವರ ಆಪ್ತ ವಲಯದಲ್ಲೂ ಗುರುತಿಸಿಕೊಂಡಿದ್ದರು.
ಹಾಲಿ ಪಾವಗಡ ಕ್ಷೇತ್ರದ ಶಾಸಕ H. V. ವೆಂಕಟೇಶ್ ಅವರಿಗೆ ಪಿತೃವಿಯೋಗ ಉಂಟಾಗಿದ್ದು, ಹಿರಿಯ ನಾಯಕನ ಅಗಲಿಕೆಯಿಂದ ಪಾವಗಡ ಸೇರಿದಂತೆ ಜಿಲ್ಲೆಯಾದ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ.


