ತುಮಕೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸಿದ್ದಪುರದಲ್ಲಿ ನಡೆದಿದೆ.
ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4), ಕೆರೆಗೆ ಬಿದ್ದು ಆತ್ಮಹತ್ಯೆಗೆ ಶರಣಾದವರು.
ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್ ಗಂಡನ ಕಿರುಕುಳಕ್ಕೆ ಬೇಸತ್ತು ಇಂದು ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ
ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿನೀಡಿದ್ದು ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.