ತುಮಕೂರು : ಗೃಹ ಸಚಿವ ಡಾ. ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆದಿದೆ. ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಗಳಾದ ತುಮಕೂರಿನ ಎಸ್‍ಎಸ್‌ಐಟಿ ಹಾಗೂ ಮೆಡಿಕಲ್ ಕಾಲೇಜಿನ ಮೇಲೆ ಇಡಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ತುಮಕೂರಿನ ಹೆಗ್ಗೆರೆ ಬಳಿ ಇರುವ ಮೆಡಿಕಲ್ ಕಾಲೇಜು ಕಡೆಗೆ ಸುಮಾರು 5 ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳು ಆಗಮಿಸಿದ್ದು ಶಿಕ್ಷಣ ಸಂಸ್ಥೆಗಳಲ್ಲಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ಮಾಹಿತಿ ದೊರೆತಿದೆ.