ತುಮಕೂರು : ಪತಿ ಪತ್ನಿಯನ್ನೇ ಭೀಕರವಾಗಿ ಕೊಲೆ ಮಾಡಿ ದೇಹದ ಅಂಗಾಂಗ ಕತ್ತರಿಸಿ ವಿಕೃತಿ ಮೆರೆದ ಘಟನೆ ತುಮಕೂರಿನ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ (32), ಮೃತ ದುರ್ದೈವಿ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್ ಎಂಬಾತನೇ ಕೃತ್ಯ ಎಸಗಿದ್ದಾನೆ. ಆರೋಪಿಯು ಪತ್ನಿಯ ಕತ್ತು ಹಾಗೂ ದೇಹದ ಇತರ ಅಂಗಾಂಗಗಳನ್ನು ಕತ್ತರಿಸಿ ವಿಕೃತಿ ಮೆರೆದಿ ದ್ದಾನೆ.
ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಪ್ಪಳನ್ನ ಮದುವೆಯಾಗಿದ್ದ ಶಿವರಾಮ್ ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ.ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದು,ಮರದ ಸಾಮಿಲ್ ವೊಂದರಲ್ಲಿ ಹೆಲ್ಪರ್ ಆಗಿ ಕೆಲಸ ಮಾಡ್ತಿದ್ದನು.ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತ ಇದ್ದು ನಿನ್ನೆ ರಾತ್ರಿ ಪತ್ನಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ.
ವಾಸವಿದ್ದ ಬಾಡಿಗೆ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆಮಾಡಿದ್ದಾನೆ.
ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಪತಿ ಶಿವರಾಮ್ ನನ್ನು ಬಂಧಿಸಿದ್ದಾರೆ.


