ತುಮಕೂರು : ಯುವತಿಯನ್ನು ಕೊಲೆ ಮಾಡಿ ಬಳಿಕ ಗುರುತು ಸಿಗಬಾರೆಂದು ಅರ್ಧಂಬರ್ಧ ಸುಟ್ಟು ಹಾಕಿ ತುಮಕೂರಿನ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿಯ ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ 206ರ ಪಕ್ಕದ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ.
ಸುಮಾರು 25 ವರ್ಷ ಪ್ರಾಯವಾಗಿರಬಹುದೆಂದು ಅಂದಾಜಿಸಲಾಗಿದ್ದು ಯುವತಿಯನ್ನು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಟ್ಟಿರುವ ಯುವತಿ ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವತಿ ಮುಖವು ಸಂಪೂರ್ಣ ಸುಟ್ಟು ಹೋಗಿದ್ದು, ಗುರುತು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.