ತುಮಕೂರು : ಇತ್ತೀಚಿನ ದಿನಗಳಲ್ಲಿ ಜನಸಾಮನ್ಯರು ಒತ್ತಡಕ್ಕೆ ಮಣಿದು ಆತ್ಮಹತ್ಯೆ ಮಾಡುವ ಜನರ ಸಂಖ್ಯೆ ಹೆಚ್ಚಾಗುತ್ತಾ ಇದ್ದು ಇದಕ್ಕೆ ಸಾಲಗಾರರ ಕಿರಿಕಿರಿ ಕಾರಣವಾಗಿದೆ. ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ, ಪತ್ನಿ, ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಘಟನೆ ಸದಾಶಿವನಗರದ ಮನೆಯೊಂದರಲ್ಲಿ ನಡೆದಿದೆ. ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್ನೋಟ್ನಲ್ಲಿ ಉಲ್ಲೇಖಿಸಲಾಗಿದೆ. ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದರು. ಸದ್ಯ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತಿಲಕ್‌ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗರೀಬ್ ಸಾಬ್ ಅವರು ಎರಡು ಪುಟಗಳ ಡೆತ್ ನೋಟ್ ಬರೆದು 5.22 ನಿಮಿಷಗಳ ಮೊದಲು ವಿಡಿಯೋ ಮಾಡಿದ್ದರು. ಅದೇ ಕಟ್ಟಡದ ನೆಲಮಹಡಿಯಲ್ಲಿ ವಾಸವಾಗಿರುವ ವ್ಯಕ್ತಿ ಮತ್ತು ಆತನ ಕುಟುಂಬದ ಸದಸ್ಯರು ತನ್ನ ಕುಟುಂಬವನ್ನು ಹೇಗೆ ಚಿತ್ರಹಿಂಸೆ ನೀಡಿದ್ದಾರೆ ಮತ್ತು ತೀವ್ರ ಹೆಜ್ಜೆ ಇಡಲು ಕಾರಣವಾಯಿತು ಎಂಬುದನ್ನು ಅವರು ವೀಡಿಯೊದಲ್ಲಿ ವಿವರಿಸಿದ್ದಾರೆ. ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ವಿಶೇಷ ಮನವಿ ಸಲ್ಲಿಸಿದ್ದರು. ಪರಮೇಶ್ವರ ಅವರು ತುಮಕೂರು ಜಿಲ್ಲೆಯವರು.ನೆಲಮಹಡಿಯಲ್ಲಿ ನೆಲೆಸಿರುವ ಕಲಂದರ್ ಎಂಬಾತ ರಾಕ್ಷಸನೆಂದು ಸಾವಿಗೆ ಮುನ್ನ ವಿಡಿಯೋದಲ್ಲಿ ಗರೀಬ್ ಸಾಬ್ ಹೇಳಿಕೆ ನೀಡಿದ್ದು, ಪತ್ನಿ ಮತ್ತು ಮಕ್ಕಳಿಗೆ ಚಿತ್ರಹಿಂಸೆ ನೀಡಿ ಥಳಿಸಿದ್ದಾರೆ. ಕಲಂದರ್ ಕೂಡ ಅಸಭ್ಯ ಭಾಷೆ ಬಳಸಿದ್ದಾರೆ. “ನಾನು ಸತ್ತರೆ, ಅವರು ಉಳಿಯುವುದಿಲ್ಲ ಎಂದು ನನ್ನ ಹೆಂಡತಿ ಮತ್ತು ಮಕ್ಕಳು ಭಯಪಡುತ್ತಾರೆ. ನನ್ನೊಂದಿಗೆ ನನ್ನ ಹೆಂಡತಿ ಮತ್ತು ಮಕ್ಕಳು ಸಹ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಈ ಸಂಬಂಧ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.