Wednesday, October 22, 2025
Flats for sale
Homeರಾಜ್ಯತುಮಕೂರು : ಸೆಲ್ಫಿ ಚಟಕ್ಕೆ ಕೆರೆಕೋಡಿ ನೀರಿನಲ್ಲಿ ಕಾಲು ಜಾರಿ ಕೊಚ್ಚಿ ಹೋದ ವಿದ್ಯಾರ್ಥಿನಿ ಪವಾಡ...

ತುಮಕೂರು : ಸೆಲ್ಫಿ ಚಟಕ್ಕೆ ಕೆರೆಕೋಡಿ ನೀರಿನಲ್ಲಿ ಕಾಲು ಜಾರಿ ಕೊಚ್ಚಿ ಹೋದ ವಿದ್ಯಾರ್ಥಿನಿ ಪವಾಡ ಸದೃಶ”ದಿಂದ ಪಾರು ..!

ತುಮಕೂರು : ತಾಲೂಕಿನ ಮೈದಾಳ ಕೆರೆಕೋಡಿ ನೀರಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ.

ನಗರದ ಎಸ್‌ಐಟಿ ಕಾಲೇಜಿನಲ್ಲಿ ಎಂಜಿನಿಯರಿAಗ್ ವ್ಯಾಸಂಗ ಮಾಡುತ್ತಿದ್ದ ಗುಬ್ಬಿ ತಾಲೂಕಿನ ಶಿವರಾಂಪುರ ನಿವಾಸಿ ಹಂಸ (19) ಗೆಳತಿಯರ ಜತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ಭಾನುವಾರ ಮಧ್ಯಾಹ್ನ ತೆರಳಿದ್ದರು. ನಂತರ ಅಲ್ಲೇ ಸಮೀಪದಲ್ಲಿದ್ದ ಮೈದಾಳ ಕೆರೆ ಕೋಡಿ ಬಳಿ ಹೋಗಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ತಕ್ಷಣ ಇತರ ಗೆಳತಿಯರು ಪೊಲೀಸರಿಗೆ ವಿಷಯ ತಿಳಿಸಿದು ಕೂಡಲೇ ಕ್ಯಾತ್ಸಂದ್ರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಗಾಗಿ ತೀವ್ರ ಕಾರ್ಯಾಚರಣೆನಡೆಸಿದ್ದರು.

ಸೋಮವಾರ ಬೆಳಗ್ಗೆ ಮತ್ತೆ ರಕ್ಷಣಾ ಕಾರ್ಯ ವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಕೈಗೊAಡಾಗ ಕಲ್ಲಿನ ಪೊಟರೆಯಲ್ಲಿ ವಿದ್ಯಾರ್ಥಿನಿ ಸಿಲುಕಿಕೊಂಡಿರುವುದು ಪತ್ತೆಯಾಗಿದೆ. ಸದ್ಯ ವಿದ್ಯಾರ್ಥಿನಿ ಅಸ್ವಸ್ಥರಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.

ಸತತ 12 ಗಂಟೆ ಕಾರ್ಯಾಚರಣೆ: ಸತತ 12 ಗಂಟೆ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುವ ಮೂಲಕ ವಿದ್ಯಾರ್ಥಿನಿಯನ್ನು ಜೀವಂತವಾಗಿ ರಕ್ಷಿಸಿದ್ದು ಅಗ್ನಿಶಾಮಕ ದಳದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರಿಂದ ಪ್ರಶAಸೆಯ ಮಹಾಪೂರವೇ ಹರಿದು ಬಂದಿದೆ. ಹಂಸ ಇಡೀ ರಾತ್ರಿ ಕಲ್ಲಿನ ಪೊಟರೆಯಲ್ಲಿ ಕಾಲ ಕಳೆದಿದ್ದು,ಪವಾಡ ಎಂಬAತೆ ಬದುಕುಳಿದು ಬಂದಿರುವುದು ಪೋಷಕರು ಹಾಗೂ ವಿದ್ಯಾರ್ಥಿಗಳ ಖುಷಿಗೆ ಪಾರವೇ ಇಲ್ಲದಂತಾಗಿದ್ದು ಎಸ್‌ಐಟಿ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರ ವೃಂದ ಹಾಗೂ ವಿದ್ಯಾರ್ಥಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular