ದಾವಣಗೆರೆ : ದಾವಣಗೆರೆಯಲ್ಲಿ ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ಆತ್ಮಹತ್ಯೆ ಯತ್ನದ ನಂತರ ಮನನೊಂದಿದ್ದ ಇವರು ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆಗೆ ಕೌಟುಂಬಿಕ ಕಲಹವೇ ಕಾರಣವೆಂದು ತಿಳಿದುಬಂದಿದೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.ಇತ್ತೀಚೆಗೆ ಚಂದ್ರಶೇಖರ್ ಸಂಕೋಲ್ ಅವರ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಿಂದ ಮನನೊಂದಿದ್ದ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ಇದೀಗ ಚಂದ್ರಶೇಖರ್ ಸಂಕೋಲ್ ರವರು ತಮ್ಮ ಕಾರಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಸಜೀವದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.


