ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಹಿಂದೂ ಮುಖಂಡರು ನಾಗಮಂಗಲ ಕಲ್ಲುತೂರಾಟ ಪ್ರಕರಣ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದರು.ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ್ಯ ಸಂಚಾಲಕ ಸತೀಶ್ ಪೂಜಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಮುಸ್ಲಿಂ ಮುಖಂಡನೊಬ್ಬ ತಾಕತ್ ಇದ್ದರೆ ಬೇತೂರು ರಸ್ತೆಗೆ ಬಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ.ಆದರೆ ಗಣೇಶ ಮೆರವಣಿಗೆಯಲ್ಲಿ ಸತೀಶ್ ಪೂಜಾರಿ ಭಾಗವಹಿಸಿದ್ದರು. ಮೆರವಣಿಗೆ ಸಾಗುವ ಅರಳಿಮರ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಸೇರಿದ್ದರು. ಗಣೇಶನ ಮೆರವಣಿಗೆ ಹೋಗುತ್ತಿದ್ದಾಗ ಇಸ್ಲಾಂ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.ಈ ವೇಳೆ ಕಲ್ಲು ತೂರಾಟ ನಡೆದಿದ್ದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ ಗಲಾಟೆ ನಿಲ್ಲಿಸಲು ಹರಸಾಹಸಪಟ್ಟಿದ್ದಾರೆ.
ಈ ವೇಳೆ ಗಣೇಶ ಮೆರವಣಿಗೆಯೂದ್ದಕ್ಕೂ ಕಲ್ಲು ತೂರಾಟ ಮಾಡಲಾಗಿದೆ. ಹೀಗಾಗಿ ಬೇತೂರು ರಸ್ತೆ, ಅರಳಿ ಮರ, ಅಶೋಕ ರೋಡ್, ಹಾಸಭಾವಿ ಸರ್ಕಲ್ ಉದ್ವಿಗ್ನಗೊಂಡಿವೆ. ಹಿಂದೂ ಕಾರ್ಯಕರ್ತರನ್ನ ಪೊಲೀಸರು ಚದುರಿಸಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಿದ್ದಲ್ಲದೇ ಭದ್ರತೆಗೆ ನಿಯೋಜನೆ ಮಾಡಿದ್ದ ಪೊಲೀಸರ ಮೇಲೂ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಇದರಿಂದಾಗಿ ಡಿಸಿಆರ್ಬಿ ಪೊಲೀಸ್ ರಘು ತಲೆಗೆ ಗಂಭೀರವಾದ ಗಾಯವಾಗಿದೆ. ಎರಡು ಗುಂಪುಗಳಿಂದ ಜನರು ಜಮಾಯಿಸಿದ್ದಾರೆ.ಈ ವೇಳೆ ಮುಸ್ಲಿಂ ಮುಖಂಡರೇ ಜನಸಂದಣಿಯನ್ನು ನಿಯಂತ್ರಣ ಮಾಡಿದ್ದಾರೆಂದು ತಿಳಿದುಬಂದಿದೆ.