ದುಬೈ: ನಾಳೆ ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡ ಆಡುವ ಹನ್ನೊಂದರ ಬಳಗವನ್ನು ಮತ್ತೊಮ್ಮೆ ಪರಿಶೀಲಿಸಬೇಕಿದೆ. ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಯಾವ ಕ್ರಮಾಂಕದಲ್ಲಿ ಆಡಬೇಕು ಎನ್ನುವುದು ಚರ್ಚೆಯ ವಿಷಯವಾಗಿದೆ.
ಮೊನ್ನೆ ಯುಎಇ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಕಳುಹಿಸದೇ ವಿಶ್ರಾಂತಿ ನೀಡಲಾಗಿತ್ತು. ಓಪನರ್ ಅಭಿಷೇಕ್ ಶರ್ಮಾ ಔಟ್ ಆದಾಗ ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯ ಕುಮಾರ್ ಯಾದವ್ ಬ್ಯಾಟಿಂಗ್ ಮಾಡಿದರು. ಹೀಗಾಗಿ ಸಂಜು ಸ್ಯಾಮ್ಸನ್ ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕೆನ್ನುವುದು ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗಾವಸ್ಕಾರ್, ಟಿ20 ಆವೃತ್ತಿಯಲ್ಲಿ ಅಂಕಿ ಅAಶ ಮುಖ್ಯವಾಗುತ್ತದೆ. ಹೀಗಾಗಿ ಸಂಜು ಸ್ಯಾಮ್ಸನ್ ಮೂರನೇ ಕ್ರಮಾಂಕದಲ್ಲಿ ಆಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಂಜುಸ್ಯಾಮ್ಸನ್ ಆರಂಭಿಕನಾಗಿ ಅಥವಾ ಮೂರನೇ ಕ್ರಮಾಂಕದಲ್ಲಿ ಪರಿಣಾಮಕಾರಿಯಾಗಿ ಬ್ಯಾಟಿಂಗ್ ಮಾಡಿಲ್ಲ. ಒಂದು ವೇಳೆ ಸಂಜು ಆರಂಭಿಕನಾಗಿ ಕಣಕ್ಕಿಳಿದರೆ ತಿಲಕ್ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ. ಕಳೆದ ಕೆಲವು ವರ್ಷಗಳಿಂದ ಸೂರ್ಯ ಕುಮಾರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದು ಯಶಸ್ಸು ಕಂಡಿದ್ದಾರೆ. ಸಂಜು ಸ್ಯಾಮ್ಸನ್ ನಾಲ್ಕನೆ ಕ್ರಮಾಂಕದಲ್ಲಿ 11ಇನ್ನಿಂಗ್ಸ್ ಗಳಿಂದ 164 ರನ್ ಗಳಿಸಿ ಕೆಳಗಿನ ಕ್ರಮಾಂಕದಲ್ಲಿ ಯಶಸ್ಸು ಕಂಡಿದ್ದಾರೆ. ಇನ್ನು ಯುವ ಬ್ಯಾಟರ್ ತಿಲಕ್ 13 ಇನ್ನಿಂಗ್ಸ್ಗಳಿAದ 443 ರನ್‌ಗಳಿಸಿದ್ದಾರೆ.