ನವದೆಹಲಿ : ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾರ ಬಂಧಿಸಿದೆ. ಅರವಿಂದ ಕೇಜ್ರಿವಾಲ್ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ED ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ EDಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.
ಹಲವು ಸಲ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳು ಭೇಟಿ ನೀಡಿ ದೆಹಲಿಯ ನಿವಾಸದಲ್ಲಿ ಶೋಧ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಜ್ರಿವಾಲ್ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಅವರ ನಿವಾಸದಲ್ಲಿ ಜಂಟಿ ನಿರ್ದೇಶಕರನ್ನೊಳಗೊಂಡ ಇಡಿ ತಂಡವು ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಬಂಧಿಸಿತು.
BRS ಶಾಸಕಿ ಕೆ. ಕವಿತಾ, ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮತ್ತು AAP RS ಸದಸ್ಯ ಸಂಜಯ್ ಸಿಂಗ್, ಇತರರ ನಂತರ ಆಪಾದಿತ ಹಗರಣದಲ್ಲಿ ಬಂಧಿಸಲ್ಪಟ್ಟ ದೊಡ್ಡ ಹೆಸರು ಕೇಜ್ರಿವಾಲ್ ಪಟ್ಟಿಯಲ್ಲಿತ್ತು.