ದೆಹಲಿ : ಲಕ್ಷ ದ್ವೀಪ ಕ್ಕೆ ಮೋದಿ ಭೇಟಿ ನೀಡಿದ ಬಳಿಕ ಮಾಲ್ಡೀವ್ಸ್ ರಾಜಕೀಯ ನಾಯಕರು ಪ್ರಧಾನಿ ಮೋದಿ ವಿರುದ್ಧ ನಡೆದ ಬಾರಿ ಟೀಕೆಗೆ ದೇಶದ ಸೆಲೆಬ್ರೆಟಿಗಳು ಮಾಲ್ಡೀವ್ಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದು ಭಾರತದಲ್ಲಿರುವ ಅತ್ಯಂತ ರಮಣೀಯ ಪ್ರವಾಸಿ ತಾಣಗಳ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.
ಕ್ರಿಕೆಟಿಗರು ಹಾಗೂ ಬಹುತೇಕ ಭಾರತೀಯರು ಭಾರತದ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಕರೆ ನೀಡಿದ್ದಾರೆ.
ಪ್ರಧಾನಿ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಉತ್ತೇಜಿಸಿದ ಬೆನ್ನಲ್ಲೇ ಮಾಲ್ಡೀವ್ಸ್ ಖ್ಯಾತೆ ತೆಗೆದಿದೆ. ಪ್ರಧಾನಿ ಮೋದಿ ಹಾಗೂ ಭಾರತೀಯರ ನಿಂದಿಸಿದ ಮಾಲ್ಡೀವ್ಸ್ ಸಚಿವರು ವಜಾ ಆಗಿದ್ದರೂ ಆಕ್ರೋಶ ಮಾತ್ರ ತಣ್ಣಗಾಗುತ್ತಿಲ್ಲ.ಭಾರತದ ಅತ್ಯಂತ ಸುಂದರ ತಾಣಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಲಕ್ಷದ್ವೀಪ, ಅಂಡಮಾನ್ ನಿಕೋಬಾರ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ಕುರಿತು ಸೆಲೆಬ್ರೆಟಿಗಳು ಟ್ವೀಟ್ ಮಾಡಿದ್ದಾರೆ. ಇದೀಗ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕರ್ನಾಟಕದ ಉಡುಪಿಯ ಮಟ್ಡು ಪಡುಕೆರೆ ಬೀಚ್ ಫೋಟೋ ಹಂಚಿಕೊಂಡು ಮಾಲ್ಡೀವ್ಸ್‌ಗೆ ತಿರುಗೇಟು ನೀಡಿದ್ದಾರೆ.
ಮಾಲ್ಡೀವ್ಸ್ ಮಾಜಿ ಅಧ್ಯಕ್ಷರು, ಪ್ರತಿ ಪಕ್ಷಗಳ ಸದಸ್ಯರು ಭಾರತೀಯರ ಬಳಿ ಕ್ಷಮೆಯಾಚಿಸುವಂತೆ ಮಾಲ್ಡೀವ್ಸ್ ಸರ್ಕಾರವನ್ನು ಆಗ್ರಹಿಸಿದೆ. ಇತ್ತ ಭಾರತೀಯರು ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಆರಂಭಿಸಿದ್ದಾರೆ. ಇತ್ತ ವಿರೇಂದ್ರ ಸೆಹ್ವಾಗ್ ಭಾರತದ ಮೂರು ತಾಣಗಳ ಸುಂದರ ಬೀಚ್ ಕುರಿತು ಫೋಟೋ ಹಂಚಿಕೊಂಡಿದ್ದಾರೆ.
ಉಡುಪಿಯ ಮಟ್ಟು ಬೀಚ್, ಪಾಂಡಿಚೇರಿಯ ಪ್ಯಾರಡೈಸ್ ಬೀಚ್, ಅಂಡಮಾನ್ ನಿಕೋಬಾರ್‌ನ ನೈಲ್ ಹಾಗೂ ಹ್ಯಾವ್ಲಾಕ್ ಬೀಚ್ ಫೋಟೋಗಳನ್ನು ಸೆಹ್ವಾಗ್ ಹಂಚಿಕೊಂಡಿದ್ದಾರೆ.
ಮಾಲ್ಡೀವ್ಸ್ ಸಚಿವರು ಭಾರತ ಹಾಗೂ ಪ್ರಧಾನ ಮಂತ್ರಿಯನ್ನು ನಿಂದಿಸಿರುವ ಈ ಸಂದರ್ಭವನ್ನು ಉತ್ತಮ ಅವಕಾಶವಾಗಿ ಬಳಸಿಕೊಂಡು ನಮ್ಮ ಸುಂದರ ಪ್ರವಾಸಿ ತಾಣಗಳಿಗೆ ಮೂಲಭೂತ ಸೌಕರ್ಯ ನೀಡಿ ಆರ್ಥಿಕತೆಯ ವೇಗ ಹೆಚ್ಚಿಸಬೇಕಿದೆ ಎಂದು ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಹಲವರು ಅನ್ವೇಷಿಸಿದ ಸ್ಥಳಗಳಿವೆ. ಈ ತಾಣಗಳಿಗೆ ಮೂಲಸೌಕರ್ಯ ಒದಗಿಸಿದರೆ ಯಾವುದಕ್ಕೂ ಕಡಿಮೆ ಇಲ್ಲ. ಪರಿಸ್ಥಿತಿಯನ್ನು ಅವಕಾಶವಾಗಿ ಪರಿವರ್ತಿಸುವುದು ಭಾರತಕ್ಕೆ ತಿಳಿದಿದೆ.
ಉಡುಪಿ ನಿಜಕ್ಕೂ ಅದ್ಭುತ.ಅತ್ಯಂತ ಸುಂದರ ಕಡಲತೀರ, ಪ್ರಾಚೀನ ದೇವಾಲಯ ಹಾಗೂ ಅತ್ಯುತ್ತಮ ಆಹಾರದಿಂದ ಉಡುಪಿ ಅಚ್ಚುಮೆಚ್ಚು ಎಂದು ಸೆಹ್ವಾಗ್ ಉಡುಪಿ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.