Friday, March 13, 2026
Flats for sale
Homeರಾಜ್ಯಧಾರವಾಡ ; ಉಪ್ಪು ತಿಂದವನು ನೀರು ಕುಡಿಯಲೇ ಬೇಕು,ತಪ್ಪು ಮಾಡಿದ ಫಯಾಜ್ ಗೆ ಕಠಿಣ ಶಿಕ್ಷೆಯಾಗಲಿ...

ಧಾರವಾಡ ; ಉಪ್ಪು ತಿಂದವನು ನೀರು ಕುಡಿಯಲೇ ಬೇಕು,ತಪ್ಪು ಮಾಡಿದ ಫಯಾಜ್ ಗೆ ಕಠಿಣ ಶಿಕ್ಷೆಯಾಗಲಿ : ತಾಯಿ ಮುಮ್ತಾಜ್​.

ಧಾರವಾಡ ; ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.ಈ ಘಟನೆಗೆ ಎಲ್ಲ ಸಂಘಟನೆಗಳು ಖಂಡಿಸಿದ್ದು ಈ ಕೊಲೆ ಮಾಡಿದ ಆರೋಪಿ ಫಯಾಜ್​ನನ್ನು ಗಲ್ಲಿಗೆ ಏರಿಸಬೇಕು ಅಥವಾ ಶೂಟ್​ಔಟ್​ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ.

ಗುರುವಾರ ಮಧ್ಯಾಹ್ನ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಪ್ರೀತಿ ನಿರಾಕರಿಸಿದ್ದಕ್ಕಾಗಿ ​ನೇಹಾಳನ್ನು ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿದೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರೇ, ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇದು ಲವ್​ ಜಿಹಾದ್​ ಎಂದು ಹೇಳುತ್ತಿವೆ. ಗೃಹ ಸಚಿವ ಜಿ ಪರಮೇಶ್ವರ ಅವರು “ಫಯಾಜ್​ ಮತ್ತು ನೇಹಾ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಹೀಗಾಗಿ ಕೊಲೆ ನಡೆದಿದೆ” ಎಂದು ಹೇಳಿದ್ದಾರೆ

23 ವರ್ಷ ವಯಸ್ಸಿನ ನೇಹಾಳನ್ನ ಆಕೆಯ ಸ್ನೇಹಿತ ಫಯಾಜ್​ 11 ಬಾರಿ ಚುಚ್ಚಿ ಕೊಂದಿದ್ದಾನೆ. ಆಕೆಯ ಸಾವನ್ನು ರಾಜ್ಯವೇ ಖಂಡಿಸುತ್ತಿದ್ದು, ಕೊಲೆಗಾರನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.ನೇಹಾ ಕೊಲೆ ಪ್ರಕರಣದ ಕುರಿತಾಗಿ ಕೊಲೆಗಾರ ಫಯಾಜ್​ ತಾಯಿ ಮುಮ್ತಾಜ್​ ಪತ್ರಿಕ್ರಿಯಿಸಿದ್ದು, ಆತನಿಗೆ ಕಠಿಣ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಎಂದು ಕಣ್ಣೀರು ಸುರಿಸಿದ್ದಾರೆ.ನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಮುಂದೆ ಕ್ಷಮೆಯಾಚಿಸುತ್ತೇನೆ. ನನ್ನ ಮಗ ಫಯಾಜ್​ಗೆ ನೇಹಾ ಪ್ರಪೋಸ್​ ಮಾಡಿದ್ದಳು. ನನ್ನ ಬಳಿ ಅವನು ಹೇಳಿದಾಗ ಲವ್ ಬೇಡ ಅಂತ ಹೇಳಿದ್ದೆ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕು ಎಂದಿದ್ದಾರೆ. ​​

ನೇಹಾ ಸಹ ತುಂಬಾ ಒಳ್ಳೆಯ ಹುಡುಗಿ. ಫಯಾಜ್​-ನೇಹಾ ಮದುವೆ ಆಗಬೇಕು ಅಂತ ಇದ್ದರು. ಮಗ ಕೆಎಎಸ್​ ಅಧಿಕಾರಿ ಆಗಬೇಕೆಂದು ಕನಸು ಕಂಡಿದ್ದೆ. ಆದರೆ, ಈ ರೀತಿ ಆಗಿದ್ದಕ್ಕೆ ಬಹಳ ಸಂಕಟ ಆಗುತ್ತೆ. ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular