Wednesday, June 24, 2026
Homeಕ್ರೀಡೆನವದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ದಿನವೇ ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ.

ನವದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟ ದಿನವೇ ರೋಹಿತ್ ಶರ್ಮಾಗೆ ಪದ್ಮಶ್ರೀ ಗೌರವ.

ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಅವರಿಗೆ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಶೇಷವೆಂದರೆ, ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ದಿನವೇ ಈ ಗೌರವ ಅವರಿಗೆ ಲಭಿಸಿದೆ.

2007ರ ಜೂನ್ 23ರಂದು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿಟ್ಟಿದ್ದ ರೋಹಿತ್ ಶರ್ಮಾ, 16 ವರ್ಷಗಳ ಬಳಿಕ ಅದೇ ದಿನ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ಅಪರೂಪದ ಸಾಧನೆ ಮಾಡಿದ್ದಾರೆ.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಭಾರತೀಯ ಕ್ರಿಕೆಟ್‌ಗೆ ನೀಡಿದ ಅಪಾರ ಕೊಡುಗೆ, ನಾಯಕತ್ವ ಹಾಗೂ ದಾಖಲೆಗಳ ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ರೋಹಿತ್ ನಾಯಕತ್ವದಲ್ಲಿ ಭಾರತ ತಂಡವು 2024ರ ಟಿ20 ವಿಶ್ವಕಪ್ ಹಾಗೂ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.

ಏಕದಿನ ಕ್ರಿಕೆಟ್‌ನಲ್ಲಿ ಮೂರು ದ್ವಿಶತಕಗಳನ್ನು ಸಿಡಿಸಿರುವ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯೂ ರೋಹಿತ್ ಅವರದ್ದಾಗಿದೆ. ಅಲ್ಲದೆ 264 ರನ್‌ಗಳ ಗರಿಷ್ಠ ವೈಯಕ್ತಿಕ ಸ್ಕೋರ್ ವಿಶ್ವದಾಖಲೆಯೂ ಅವರ ಹೆಸರಿನಲ್ಲಿದೆ.

ಪ್ರಶಸ್ತಿ ಸ್ವೀಕಾರದ ವೇಳೆ ಅವರ ಪತ್ನಿ ರಿತಿಕಾ ಸಜೆದೇಹು ಉಪಸ್ಥಿತರಿದ್ದು, ದೇಶಾದ್ಯಂತ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular