Friday, March 13, 2026
Flats for sale
Homeವಿದೇಶನವದೆಹಲಿ : ಅಮೆರಿಕ ಪ್ರವಾಸದಲ್ಲಿ,ರಾಹುಲ್ ಗಾಂಧಿ, ಡಿಕೆ ಶಿವಕುಮಾರ್,​​ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ ಬಲಗೈ ಬಂಟ ಸ್ಯಾಮ್‌ ಪಿತ್ರೋಡಾ..!

ನವದೆಹಲಿ : ಅಮೆರಿಕ ಪ್ರವಾಸದಲ್ಲಿ,ರಾಹುಲ್ ಗಾಂಧಿ, ಡಿಕೆ ಶಿವಕುಮಾರ್,​​ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ ಬಲಗೈ ಬಂಟ ಸ್ಯಾಮ್‌ ಪಿತ್ರೋಡಾ..!

ನವದೆಹಲಿ : ಅಮೇರಿಕಾ ಪ್ರವಾಸದಲ್ಲಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಭಾರತೀಯ ಡಯಾಸ್ಪೊರಾ ಸದಸ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇದರ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದಿಂದ ಆಹ್ವಾನ ಬಂದಿದೆ.ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನ ನೀಡಿದ್ದು ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್​ ಹತ್ತಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಎಲೆಕ್ಷನ್​​ನಲ್ಲಿ ಕಮಲಾ ಹ್ಯಾರಿಸ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇವರ ವಿರುದ್ಧ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಎರಡು ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಕಮಲಾ ಹ್ಯಾರಿಸ್ ಸದ್ಯ ಅಮೆರಿಕದ ಉಪಾಧ್ಯಕ್ಷೆಯಾಗಿದ್ದು ಒಂದು ವೇಳೆ ಎಲೆಕ್ಷನ್​ ಅಲ್ಲಿ ಗೆಲುವು ಸಾಧಿಸಿದರೆ ಅಮೆರಿಕದ ಪ್ರೆಸಿಡೆಂಟ್ ಆಗಲಿದ್ದಾರೆ.ಈ ಹಿನ್ನೆಲೆ ಡಿ.ಕೆ ಶಿವಕುಮಾರ್ ಫ್ಯಾಮಿಲಿ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.

ಒಟ್ಟಿನಲ್ಲಿ ರಾಹುಲ್ ಗಾಂಧಿ ಹಾಗೂ ಡಿ.ಕೆ ಶಿವಕುಮಾರ್ ಅಮೆರಿಕಕ್ಕೆ ಹೋಗಿರುವುದು ಕೇಂದ್ರ ಮೋದಿ ಸರಕಾರದ ಕೆಂಗಣ್ಣಿಗೆ ಗುರಿಯಾಗಿದೆ ಆದರೆ ರಾಹುಲ್ ಗಾಂಧಿ ಅಮೆರಿಕದ ಡಲ್ಲಾಸ್‌ನ ಟೆಕ್ಸಾಸ್‌ನಲ್ಲಿ ಭಾರತೀಯ ಡಯಾಸ್ಪೊರಾ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಸದಸ್ಯರಿಂದ ನನಗೆ ದೊರೆತ ಆತ್ಮೀಯ ಸ್ವಾಗತದಿಂದ ನಾನು ನಿಜವಾಗಿಯೂ ಸಂತೋಷಗೊಂಡಿದ್ದೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular