ನವದೆಹಲಿ : ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲು ಮಾಡಲಾಗಿದೆ. 73 ವರ್ಷ ವಯಸ್ಸಿನ ಜಗದೀಪ್ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಎಐಐಎಂಎಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದ್ರೋಗ ತಜ್ಞನ ಡಾ. ರಾಜೀವ್ ನಾರಾಂಗ್ ಉಸ್ತುವಾರಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ತಂಡ ನಿಗಾವಹಿಸಿದೆ.
ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ವರದಿ ಮಾಡಿದ್ದು, ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ಅವರು ಧಂಖರ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಲು ಏಮ್ಸ್‌ಗೆ ಭೇಟಿ ನೀಡಿದ್ದಾರೆ.