ನವದೆಹಲಿ : ರಾಜ್ಯದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆಗೆ ನಂಟು ಹೊAದಿರುವ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ತನಿಖಾ ದಳ(ಎನ್ ಐಎ)ಅಧಿಕಾರಿಗಳು ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ, ತ್ರಿಪುರಾ ಸೇರಿ ಒಂಭತ್ತು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನು ಎನ್ ಐಎ ಅಧಿಕಾರಿಗಳು ಕೈಗೊಂಡಿದ್ದಾರೆ.
ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್‌ಟಾಪ್ ಹಾಗೂ ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬAಧಿಸಿದ ಸಾಕ್ಷ್ಯ ಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜತೆಗೆ ಉಗ್ರಸಂಘಟನೆಯ ಕುರಿತು ಪ್ರಚಾರ,ಬೆಂಬಲ ಹಾಗೂ ಧನಸಹಾಯ ಮಾಡುವ ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳುವ ಸಲುವಾಗಿ ಎನ್‌ಐಎ ಅಧಿಕಾರಿಗಳು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿದ್ದಾರೆ.
ಮೊಹಮ್ಮದ್, ಸೋಜಿಬ್ಮಿಯಾನ್,ಮುನ್ನಾ ಖಾಲಿದ್ ಅನ್ಸಾರಿ, ಅಜರುಲ್ ಇಸ್ಲಾಂ, ಅಬ್ದುಲ್ ಲತೀಫ್ ಎಂದು ಗುರುತಿಸಲಾದ ವ್ಯಕ್ತಿ ಹಾಗೂ ನಾಲ್ವರು ಬಾಂಗ್ಲಾದೇಶ ಪ್ರಜೆಗಳು ಸೇರಿ 2023 ರ ನವೆಂಬರ್‌ನಲ್ಲಿ ಎನ್‌ಐಎ ಚಾರ್ಜ್ಶೀಟ್ ಸಲ್ಲಿಸಿತ್ತು. ಬಂಧಿತನಾಗಿದ್ದ ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾಗಿದ್ದ ಎಂದು ಎನ್‌ಐಎ ತಿಳಿಸಿದೆ.ಬಂಧಿತ ಆರೋಪಿಗಳು ತಮ್ಮ ಉಗ್ರ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆ ಗಳನ್ನು ಸೃಷ್ಟಿಸಿದ್ದರು
ಎಂಬುದು ಎನ್‌ಐಎ ತನಿಖೆಯಿಂದ ತಿಳಿದು ಬಂದಿತ್ತು. ಉಗ್ರ ಚಟುವಟಿಕೆ ನಡೆಸಲು ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಬಂಧಿತರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜತೆಗೆ ಅಲ್ ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು.
ಅಲ್-ಖೈದಾಗೆ ಹಣ ಸಂಗ್ರಹಿಸಿ ಕಳುಹಿಸಿಕೊಡುತ್ತಿದ್ದರು. ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು ಎಂದು ಎನ್‌ಐಎ ಮಾಹಿತಿ ನೀಡಿದೆ.ರಾಮೇಶ್ವರಂ ಕೆಫೆ ಸ್ಫೋಟ: ಬಂಧಿತ ಉಗ್ರ ಮತೀನ್ ಕರ್ನಾಟಕದ ‘ಐಸಿಸ್’ ಮುಖ್ಯಸ್ಥ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಉಗ್ರರಿಗೆ ಐಸಿಸ್ ನಂಟು!ರಾಷ್ಟçಮಟ್ಟದಲ್ಲಿ ಸದ್ದು ಮಾಡಿದ್ದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟಿçÃಯ ತನಿಖಾ ದಳ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದೆ. ಕೃತ್ಯದ ಹಿಂದೆ ಆರು ಉಗ್ರರ ಕೈವಾಡವಿದ್ದು, ಇವರು ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕದಲ್ಲಿಇದ್ದರು ಎಂಬುದನ್ನು ಎನ್‌ಐಎ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಿದೆ.