ನವದೆಹಲಿ : ಕಾಂಗ್ರೆಸ್ ಪಕ್ಷಕ್ಕೆ ಸಂಬಂದಿಸಿದ ನ್ಯಾಷನಲ್ ಹೆರಾಲ್ಡ್ ನ್ಯೂಸ್ ಪೇಪರ್ ಅಕ್ರಮ ಪ್ರಕರಣದಲ್ಲಿ 751.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ತಿಳಿಸಿದೆ.
ಪ್ರಕರಣದ ತನಿಖೆ ಸಮಯದಲ್ಲಿ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಈ ಅಪರಾಧದ ಆಸ್ತಿಯನ್ನು ಹಲವು ರಾಜ್ಯಗಳಲ್ಲಿ ಹೊಂದಿರುವುದಾಗಿ ತಿಳಿದು ಬಂದಿತ್ತು. ದೆಹಲಿ, ಮುಂಬೈ ಮತ್ತು ಲಖನೌಗಳಲ್ಲಿದ್ದ 661.69 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ.
ಯಂಗ್ ಇಂಡಿಯನ್ ಹೊಂದಿದ್ದ 90.21ಕೋಟಿ ರೂ. ಮೌಲ್ಯದ ಹೂಡಿಕೆ ಮಾದರಿಯ ಎಜೆಎಲ್ ಷೇರುಗಳನ್ನು ಜಪ್ತು ಮಾಡಿಕೊಳ್ಳಲಾಗಿದೆ. ಇದು ಬಿಜೆಪಿಯ ದ್ವೇಷ ರಾಜಕಾರಣ ಎಂದು ಕಾAಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘವಿ ಟೀಕಿಸಿದ್ದಾರೆ. ಈಗ ಐದು ರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸೋಲುವ ಹತಾಶೆಯಿಂದ ಇಂಥ ಕ್ರಮಕ್ಕೆ ಕೇಂದ್ರ ಮುಂದಾಗಿದೆ. ಈ ಪ್ರಕರಣದಲ್ಲಿ ಯಾವುದೇ ಆಸ್ತಿಯನ್ನು ವರ್ಗಾಯಿಸಿಲ್ಲ. ಹಣದ ವಹಿವಾಟು ಕೂಡ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯ ಪಾಲುದಾರರಾದ ಸಿಬಿಐ, ಇಡಿ ಅಥವಾ ಐಟಿಗಳಿಂದ ಕಾಂಗ್ರೆಸ್ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.
ಏನಿದು ಪ್ರಕರಣ?: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪಬ್ಲಿಷರ್ ಅಸೋಸಿಯೇಟೆಡ್ ಜರ್ನಲ್ಸ್(ಎಜೆಎಲ್) ಮತ್ತು ರಾಹುಲ್ ಗಾಂಧಿ ನೇತೃತ್ವದ ಯಂಗ್ ಇAಡಿಯನ್ ಸಂಸ್ಥೆಯ ನಡುವೆ ನಡೆದಿರುವ ಅಕ್ರಮ ವಹಿವಾಟು ಈ ಪ್ರಕರಣದ ಮೂಲ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾಂಗ್ರೆಸ್ನಾ ಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಲವರ ವಿಚಾರಣೆಯನ್ನು ನಡೆಸಲಾಗಿದೆ.