Sunday, March 15, 2026
Flats for sale
Homeದೇಶನವದೆಹಲಿ : ಖ್ಯಾತ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ ನಿಧನ.

ನವದೆಹಲಿ : ಖ್ಯಾತ ನ್ಯಾಯಶಾಸ್ತ್ರಜ್ಞ ಫಾಲಿ ಎಸ್ ನಾರಿಮನ್ ನಿಧನ.

ನವದೆಹಲಿ : ಖ್ಯಾತ ನ್ಯಾಯಶಾಸ್ತ್ರಜ್ಞ ಹಾಗೂ ಹಿರಿಯ ವಕೀಲ ಫಾಲಿ ಎಸ್ ನಾರಿಮನ್ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. 95 ವರ್ಷದ ನಾರಿಮನ್ ಅವರು ಹೃದಯ ಸಂಬಂಧಿ ಸಮಸ್ಯೆಗಳು ಸೇರಿದಂತೆ ಹಲವು ಕಾಯಿಲೆಗಳಿಂದ ಬಳಲುತ್ತಿದ್ದರು.

ಪದ್ಮವಿಭೂಷಣ ಪುರಸ್ಕೃತರಾದ ನಾರಿಮನ್, ಭಾರತೀಯ ನ್ಯಾಯಾಂಗದ “ಭೀಷ್ಮ ಪಿತಾಮ” ಎಂದು ಕರೆಯುತಿದ್ದರು , 1929 ರಂದು ಜನವರಿ 10 ರಂದು ಜನಿಸಿದ ಅವರು ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್‌ನ ವಕೀಲರಾಗಿ ವೃತ್ತಿ ಆರಂಭಿಸಿದರು. 1961 ರಲ್ಲಿ ಹಿರಿಯ ವಕೀಲರಾಗಿ ನೇಮಕಗೊಂಡರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.1991 ರಿಂದ 2010 ರವರೆಗೆ ಬಾರ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿದ್ದರು, 1989 ರಿಂದ 2005 ರವರೆಗೆ ICC (ಇಂಟರ್ನ್ಯಾಷನಲ್ ಚೇಂಬರ್ ಆಫ್ ಕಾಮರ್ಸ್) ಪ್ಯಾರಿಸ್ನ ಇಂಟರ್ನ್ಯಾಷನಲ್ ಕೋರ್ಟ್ ಆಫ್ ಆರ್ಬಿಟ್ರೇಶನ್‌ನ ಉಪಾಧ್ಯಕ್ಷರಾಗಿದ್ದರು ಮತ್ತು ಇಂಟರ್ನ್ಯಾಷನಲ್ ಕೌನ್ಸಿಲ್ ಫಾರ್ ಕಮರ್ಷಿಯಲ್ ಆರ್ಬಿಟ್ರೇಶನ್‌ನ ಅಧ್ಯಕ್ಷರಾಗಿದ್ದರು.

ತುರ್ತು ಪರಿಸ್ಥಿತಿಯನ್ನು ಘೋಷಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ನಿರ್ಧಾರವನ್ನು ಪ್ರತಿಭಟಿಸಿ ಅವರು 1975 ರಲ್ಲಿ ರಾಜೀನಾಮೆ ನೀಡಿದರು.ಕಾವೇರಿ ಜಲ ವಿವಾದ ಪ್ರಕರಣದಲ್ಲಿ ಕರ್ನಾಟಕ ಪರ ನಾರಿಮನ್ ವಾದ ಮಂಡಿಸಿದ್ದರು.ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪರ ವಾದ ಮಂಡಿಸಿದ್ದ ಕಾರಣದಿಂದ ಫಾಲಿ ನಾರಿಮನ್ ರಾಜ್ಯದ ಜನತೆಗೆ ಪರಿಚಿತರು. ಆದರೆ ಅವರಿಗೆ ಲಕ್ಷಗಟ್ಟಲೆ ಶುಲ್ಕ ಪಾವತಿಸುತ್ತಿದ್ದರೂ ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುವುದು ತಪ್ಪುತ್ತಿಲ್ಲ. ಅವರು ಸರಿಯಾಗಿ ವಾದ ಮಂಡಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು.ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular