ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವಿನ್ಯೂ ನ್ಯಾಯಾಲಯ ತಿರಸ್ಕರಿಸಿದೆ. ಹೀಗಾಗಿ ಮತ್ತಷ್ಟು ದಿನ ಜೈಲು ವಾಸ ಖಾಯಂ ಅಗಿದೆ.
ಮಗನ ಪರೀಕ್ಷೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಕೋರಿ ಕೆ. ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜಾಮೀನು ನೀಡಿಕೆಗೆ ಸೂಕ್ತ ಪ್ರಕರಣವಲ್ಲ ಎಂದಿದೆ. ಮಾರ್ಚ್ 15ರಂದು ಹೈದರಾಬಾದ್‌ನ
ಬಂಜಾರಾ ಹಿಲ್ಸ್ ನಿವಾಸದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಿಆರ್‌ಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಬಂಧಿಸಿತ್ತು.
ಈ ಹಿನ್ನೆಲೆಯಲ್ಲಿ ಪುತ್ರನ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ಅವನನು ಅವನನ್ನು ನೋಡಿಕೊಳ್ಳಲು ಅನುವಾಗುವಂತೆ ಕೋರಿ ಮಧ್ಯಂತರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿಯನ್ನು ರೋಸ್ ಅವೆನ್ಯೂ ನ್ಯಾಯಾಲಯ ವಜಾಗೊಳಿಸಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದು ಸದ್ಯ ಕೆ. ಕವಿತಾ ನ್ಯಾಯಾಂಗ ಬಂಧನ ದಲ್ಲಿದ್ದಾರೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು “ಸೌತ್ ಗ್ರೂಪ್”ನ ಪ್ರಮುಖ ಸದಸ್ಯೆ ಎಂದು ಆರೋಪಿಸಲಾಗಿದೆ, ಇದು ದೆಹಲಿಯಲ್ಲಿ ಆಡಳಿತಾರೂಢ ಎಎಪಿಗೆ ಮದ್ಯದ ಪರವಾನಗಿಗಳ ದೊಡ್ಡ ಪಾಲು ಪ್ರತಿಯಾಗಿ 100 ಕೋಟಿ ರೂಪಾಯಿ ನೀಡಲಾಗಿತ್ತು ಎಂದು ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು.