Friday, February 21, 2025
Flats for sale
Homeದೇಶನವದೆಹಲಿ : ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ ..!

ನವದೆಹಲಿ : ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ ..!

ನವದೆಹಲಿ : ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ದೇಶದ ಹೊಸ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದ ಸಮಿತಿಯು ಅವರ ಹೆಸರನ್ನು ಸೂಚಿಸಿದೆ.

ರಾಷ್ಟçಪತಿ ದ್ರೌಪದಿ ಮುರ್ಮು ಸೋಮವಾರ ಜ್ಞಾನೇಶ್ ಕುಮಾರ್ ಅವರನ್ನು ಹೊಸ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಸಿಇಸಿ ರಾಜೀವ್ ಕುಮಾರ್ ಮಂಗಳವಾರ ನಿವೃತ್ತರಾಗುತ್ತಿದ್ದAತೆ ಜ್ಞಾನೇಶ್ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಚುನಾವಣಾ ಆಯುಕ್ತರ ನೇಮಕಾತಿಗಾಗಿ ಹೊಸ ಕಾನೂನಿನಡಿಯಲ್ಲಿ ಜ್ಞಾನೇಶ್ ಕುಮಾರ್ ಈ ಹುದ್ದೆಗೆ ನೇಮಕಗೊಂಡ ಮೊದಲ ಸಿಇಸಿ ಎನಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಮತ್ತೊAದೆಡೆ, 1989 ರ ಬ್ಯಾಚ್‌ನ ಐಎಎಸ್ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ . 1988 ರ ಬ್ಯಾಚ್ ಕೇರಳ ಕೇಡರ್ ಅಧಿಕಾರಿಯಾದ ಜ್ಞಾನೇಶ್ ಕುಮಾರ್,ಕಳೆದ ವರ್ಷ ಜನವರಿಯಲ್ಲಿ ಸಹಕಾರ ಸಚಿವಾಲಯದ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದಾರೆ.

ಹೊಸ ಸಿಇಸಿಯಾಗಿ ನೇಮಕಗೊಂಡ ಜ್ಞಾನೇಶ್ ಕುಮಾರ್, ಮೇ 2022 ರಿಂದ ಅಮಿತ್ ಶಾ ಅವರ ಸಂಪುಟದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜ್ಞಾನೇಶ್ ಕುಮಾರ್ ಅವರು ಗೃಹ ಸಚಿವಾಲಯದಲ್ಲಿ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ, ಮೊದಲು ಮೇ 2006 ರಿಂದ ಸೆಪ್ಟೆಂಬರ್ 2018 ರವರೆಗೆ ಜಂಟಿ ಕಾರ್ಯದರ್ಶಿಯಾಗಿ ಮತ್ತು ನಂತರ ಸೆಪ್ಟೆಂಬರ್ 2018 ರಿಂದ ಏಪ್ರಿಲ್ 2021 ರವರೆಗೆ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಆಗಸ್ಟ್ 2019ರಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದಾಗ ಅವರು ಹೆಚ್ಚುವರಿ ಕಾರ್ಯದರ್ಶಿಯಾಗಿ ಜಮ್ಮು ಮತ್ತು ಕಾಶ್ಮೀರ ವಿಭಾಗದ ಮುಖ್ಯಸ್ಥರಾಗಿದ್ದರು.

ಜ್ಞಾನೇಶ್ ಜನವರಿ 26, 2029 ರವರೆಗೆ ಸಿಇಸಿ ಆಗಿ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ. ಅವರ ಮೇಲ್ವಿಚಾರಣೆಯಲ್ಲಿ, ಈ ವರ್ಷದ ಕೊನೆಯಲ್ಲಿ ಬಿಹಾರದಲ್ಲಿ ಮತ್ತು ಮುಂದಿನ ವರ್ಷ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular