ನವದೆಹಲಿ : ಮಾರ್ಚ್ 26 ರ ಬುಧವಾರದಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ‘ಪಕ್ಷ ವಿರೋಧಿ’ ಹೇಳಿಕೆಗಳಿಗಾಗಿ ವಿಜಯಪುರದ ಕರ್ನಾಟಕದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸುವ ಪಕ್ಷದ ನಿರ್ಧಾರವನ್ನು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂ ಪಾಠಕ್ ಅವರು ಪತ್ರದಲ್ಲಿ ತಿಳಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದಧ ಬಹಿರಂಗವಾಗಿಯೇ ಆರೋಪಗಳನ್ನು ಮಾಡಿಕೊಂಡು ಬರುತ್ತಿದ್ದರು. ಅಲ್ಲದೇ ತಮ್ಮದೇ ಒಂದು ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಇದರೇ ತಮ್ಮ ಅಬ್ಬರ ಮುಂದುವರಿಸಿದ್ದರು. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಆದದರೂ ಸಹ ಅವರು ತಮ್ಮ ಮಾತಿನ ಸಮರ ಮುಂದುವರಿಸಿದ್ದರು. ಹೀಗಾಗಿ ಅಂತಿಮವಾಗಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.