Wednesday, October 22, 2025
Flats for sale
Homeದೇಶನವದೆಹಲಿ : ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಸೇನೆ ಯತ್ನ :...

ನವದೆಹಲಿ : ಭಾರತದ 15 ನಗರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಸೇನೆ ಯತ್ನ : ಭಾರತೀಯ ಸೇನೆ ಮತ್ತೊಮ್ಮೆ ಪಾಕಿಸ್ತಾನದೊಳಗೆ ನುಗ್ಗಿ ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆ ಉಡೀಸ್..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳ 15 ನಗರಗಳಲ್ಲಿರುವ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಭಾರತದೊಂದಿಗೆ ಉದ್ವಿಗ್ನತೆಯನ್ನು ಹೆಚ್ಚಿಸಲು ಪಾಕಿಸ್ತಾನ ನಿನ್ನೆ ತಡರಾತ್ರಿ ಮತ್ತು ಇಂದು ಬೆಳಗಿನ ಜಾವ ಮಾಡಿದ ಪ್ರಯತ್ನಗಳನ್ನು ನಿರಾಕರಿಸಲಾಗಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಭಾರತೀಯ ಸೇನೆಯಿಂದ ಪಾಕಿಸ್ತಾನದ ಲಾಹೋರ್, ಕರಾಚಿ, ಸಿಯೋಲ್‌ ಕೋಟ್‌ ಮೇಲೆ ದಾಳಿ ನಡೆಸಲಾಗಿದೆ. ಭಾರತದ ಮೇಲೆ ಪಾಕ್ ದಾಳಿಯನ್ನು ವಿಫಲಗೊಳಿಸಿದ ಬಳಿಕ ಭಾರತೀಯ ಸೇನೆಯಿಂದ ದಾಳಿ ನಡೆಸಲಾಗಿದೆ. ಪಾಕಿಸ್ತಾನ ಭಾರತದ ಚಂಡೀಗಢ, ಆವಂತಿಪೊರ, ಜಲಂಧರ್, ಲೂಧಿಯಾನ, ಅಮೃತಸರ, ಪಠಾಣಕೋಟ್, ಕಪೂರ್ತಲಾ, ನಲ, ಫಲೋಡಿ, ಉತ್ತರಲೈ, ಭುಜ್, ಜಮ್ಮು, ಶ್ರೀನಗರ, ಆಧಂಪುರ, ಭಟಿಂಡಾ ಮೇಲೆ ದಾಳಿಗೆ ಯತ್ನಿಸಿತ್ತು. ನಿನ್ನೆ ರಾತ್ರಿ ಭಾರತದ 15 ನಗರಗಳ ಮೇಲೆ ಪಾಕಿಸ್ತಾನ ದಾಳಿಗೆ ಮುಂದಾಗಿತ್ತು. ಪಾಕಿಸ್ತಾನ ಸೇನೆಯ ದಾಳಿಯನ್ನು ವಿಫಲಗೊಳಿಸಿರುವ ಭಾರತೀಯ ಸೇನೆ S-400 ಏರ್​ಡಿಫೆನ್ಸ್ ಸಿಸ್ಟಮ್ ಮೂಲಕ ಪಾಕಿಸ್ತಾನದ ಚೀನಾ ನಿರ್ಮಿತ HQ-9 ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಧ್ವಂಸ ಮಾಡಿದೆ. ಪಾಕಿಸ್ತಾನದ ಕ್ಷಿಪಣಿಗಳ ಅವಶೇಷಗಳನ್ನು ಭಾರತೀಯ ಸೇನೆ ವಶಕ್ಕೆ ಪಡೆದಿದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನದ HQ-9 ವಾಯು ರಕ್ಷಣಾ ವ್ಯವಸ್ಥೆಯನ್ನು ಭಾರತ ನಾಶಪಡಿಸಿದ್ದು, ಅದರ ಫೋಟೋಗಳು ವೈರಲ್ ಆಗಿವೆ.

ಪಾಕಿಸ್ತಾನ ನಿನ್ನೆ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಾಗರಿಕರ ಮೇಲೆ ಶೆಲ್ ದಾಳಿ ನಡೆಸಿ 16 ಜನರನ್ನು ಕೊಂದಿತ್ತು. ಅಲ್ಲದೆ, ಭಾರತದ ಇನ್ನೂ 15 ನಗರಗಳ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗೆ ಪ್ಲಾನ್ ಮಾಡಿತ್ತು. ಆ ಪ್ರಯತ್ನವನ್ನು ಮೆಟ್ಟಿ ನಿಂತಿರುವ ಭಾರತೀಯ ಸೇನೆ ಇಂದು ಮತ್ತೆ ಪಾಕಿಸ್ತಾನದೊಳಗೆ ನುಗ್ಗಿ ಪಾಕಿಸ್ತಾನದ ದಾಳಿಯನ್ನು ವಿಫಲಗೊಳಿಸಿದೆ. ಈ ಮೂಲಕ ಆಪರೇಷನ್ ಸಿಂಧೂರವನ್ನು ಮುಂದುವರೆಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular